Advertisement

ವಿವಿಧ ಗ್ರಾಪಂ ಉಪಚುನಾವಣೆ: ನಿಷೇಧಾಜ್ಞೆ ಜಾರಿ

03:17 PM May 17, 2022 | Team Udayavani |

ಮಂಡ್ಯ: ಜಿಲ್ಲೆಯಲ್ಲಿ ಖಾಲಿ ಇರುವ ಮುದಗಂದೂರು, ಮಂಡ್ಯ ಗ್ರಾಮಾಂತರ, ಕೊಪ್ಪ, ಕದಲೂರು, ಅಣ್ಣೂರುಗ್ರಾಪಂಗಳಿಗೆ ಮೇ 20ರಂದು ಉಪಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ಮತಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಸ್‌.ಅಶ್ವತಿ ಆದೇಶ ಹೊರಡಿಸಿದ್ದಾರೆ.

Advertisement

ಮತದಾನದ ಸಂದರ್ಭದಲ್ಲಿ ಅಹಿತಕರ ಕೃತ್ಯ ಕೈಗೊಳ್ಳಬಹುದಾದ ಸಾಧ್ಯತೆಗಳಿದ್ದು, ಇಂತಹ ಕೃತ್ಯಗಳನ್ನು ನಿಯಂತ್ರಿಸಲು ಮತ್ತು ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮೇ 20ರ ಬೆಳಗ್ಗೆ 5ರಿಂದ ಸಂಜೆ 6ರವರೆಗೆ ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದೆ.

ಅಣಕು ಪ್ರದರ್ಶನ ನಿಷಿದ್ಧ: ಮತದಾನ ನಡೆಯುವ ಗ್ರಾಪಂ ಮತಗಟ್ಟೆಗಳ ಸುತ್ತ 100 ಮೀಟರ್‌ ವ್ಯಾಪ್ತಿ ಯಲ್ಲಿ ಯಾವುದೇ ಅಂಗಡಿ ಮುಂಗಟ್ಟು ತೆರೆಯುವಂತಿಲ್ಲ. ನಿಷೇಧಾಜ್ಞೆ ಇರುವ ಯಾವುದೇ ಪ್ರದೇಶದಲ್ಲಿಯೂ ಜನ ಮಾರಕಾಸ್ತ್ರ ಹಿಡಿದು ತಿರುಗಾಡುವಂತಿಲ್ಲ. ಯಾವುದೇ ಮೆರವಣಿಗೆ ಸಭೆ-ಸಮಾರಂಭ ಮಾಡುವಂತಿಲ್ಲ. ಪಟಾಕಿ ಸಿಡಿಮದ್ದು ಹಾಗೂ ಇತರೆ ಸ್ಫೋಟಕಗಳನ್ನು ಉಪಯೋಗಿಸುವಂತಿಲ್ಲ. ಮನುಷ್ಯ ಶವಗಳ ಅಥವಾ ಪ್ರತಿಕೃತಿ ಅಣುಕುಗಳ ಪ್ರದರ್ಶನಮಾಡುವುದನ್ನು ನಿರ್ಬಂಧಿಸಲಾಗಿದೆ.

ಅನ್ವಯಿಸುವುದಿಲ್ಲ: ಬಹಿರಂಗವಾಗಿ ಘೋಷಣೆ ಮಾಡುವುದು, ಪ್ರಚೋಧನಾತ್ಮಕ ಮತ್ತು ಉದ್ರೇಕಕಾರಿ, ಕಾನೂನು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿ ಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು. ಈ ನಿಷೇಧಾಜ್ಞೆಯೂ ಸದುದ್ದೇಶದ ಮದುವೆ, ಶವಸಂಸ್ಕಾರ ಕಾರ್ಯಗಳಿಗೆ, ಶಾಂತಿ ಸುವ್ಯವಸ್ಥೆ ಕಾಪಾಡುವ ಮತ್ತು ಚುನಾವಣೆ ಕಾರ್ಯಕ್ಕೆ ನೇಮಿಸಲ್ಪಟ್ಟಿರುವ ಅಧಿಕಾರಿ-ಸಿಬ್ಬಂದಿ ವರ್ಗದವರಿಗೆ ಮತ್ತು ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಸಂತೆ ಜಾತ್ರೆ ನಿಷೇಧ: ಉಪಚುನಾವಣೆ ನಡೆಯುವ ಗ್ರಾಪಂ ವ್ಯಾಪ್ತಿಯಲ್ಲಿ ಮೇ 20ರಂದು ಯಾವುದೇ ಜಾತ್ರೆ(ದನಗಳ ಜಾತ್ರೆ ಸೇರಿದಂತೆ), ಸಂತೆ ಹಾಗೂ ಇತ್ಯಾದಿ ಉತ್ಸವ ನಿಷೇ ಧಿಸಿ ಜಿಲ್ಲಾಧಿಕಾರಿ ಎಸ್‌.ಅಶ್ವತಿ ಆದೇಶ ಹೊರಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next