Advertisement

ಗ್ರಾಮ ಪಂಚಾಯತ್‌ ಅಧ್ಯಕ್ಷ, ಸದಸ್ಯರ ಅಧಿಕಾರ ಮೊಟಕಿಲ್ಲ : ಸಚಿವ ಕೋಟ ಶ್ರೀನಿವಾಸ ಪೂಜಾರಿ

09:43 AM Oct 09, 2022 | Team Udayavani |

ಉಡುಪಿ : ಗ್ರಾಮ ಪಂಚಾಯತ್‌ ಅಧ್ಯಕ್ಷ, ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ಪ್ರಸ್ತಾವವನ್ನು ನಮ್ಮ ಸರಕಾರ ಒಪ್ಪುವುದಿಲ್ಲ. ಈ ಕುರಿತು ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸಲಾಗಿದೆ. ಪ್ರಸ್ತಾವನೆ ಬಂದಲ್ಲಿ ಅದನ್ನು ತಿರಸ್ಕರಿಸುವ ಭರವಸೆ ನೀಡಿದ್ದಾರೆ. ಈ ಬಗ್ಗೆ ಗ್ರಾ.ಪಂ. ಅಧ್ಯಕ್ಷ, ಸದಸ್ಯರಲ್ಲಿ ಯಾವುದೇ ಗೊಂದಲ ಬೇಡ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

Advertisement

ಚೆಕ್‌ಗೆ ಸಹಿ, ಇನ್ನಿತರ ಅಧಿಕಾರವನ್ನು ಪಿಡಿಒಗೆ ಕೊಡಲಾಗುತ್ತದೆ ಎಂಬ ಆತಂಕ ಗ್ರಾ.ಪಂ. ಅಧ್ಯಕ್ಷ, ಸದಸ್ಯರಲ್ಲಿತ್ತು. ಈ ವಿಷಯವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಶಾಸಕರು ಸೇರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹಾಗೂ ರಾಜ್ಯ ಪಂಚಾಯತ್‌ ರಾಜ್‌ ಪ್ರಕೋಷ್ಠದ ಸಂಚಾಲಕ, ಸಹ ಸಂಚಾಲಕರ ಗಮನಕ್ಕೆ ತರಲಾಯಿತು. ಇದರ ಕುರಿತಾಗಿ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದಾರೆ. ಪಂ.ರಾಜ್‌ ವ್ಯವಸ್ಥೆಯಲ್ಲಿ ಗ್ರಾ.ಪಂ. ಅಧ್ಯಕ್ಷ, ಸದಸ್ಯರ ಅಧಿಕಾರವನ್ನು ಯಾವುದೇ ಕಾರಣಕ್ಕೂ ಮೊಟಕು ಗೊಳಿಸದೆ ಇನ್ನೂ ಹೆಚ್ಚಿನ ಬಲವನ್ನು ಈ ಸರಕಾರ ನೀಡಲಿದೆ ಎಂದು ಸಚಿವರು ತಿಳಿಸಿರುವುದಾಗಿ ಜಿಲ್ಲಾ ಪಂಚಾಯತ್‌ ರಾಜ್‌ ಪ್ರಕೋಷ್ಠದ ಸಂಚಾಲಕ ರಾಜೀವ್‌ ಕುಲಾಲ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಮಳೆಯ ನಡುವೆ ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ನವಜಾತ ಹೆಣ್ಣು ಮಗು: ಆಸ್ಪತ್ರೆಯಲ್ಲಿ ಚಿಕಿತ್ಸೆ

Advertisement

Udayavani is now on Telegram. Click here to join our channel and stay updated with the latest news.

Next