Advertisement
ನಗರದ ಕ್ರಸೆಂಟ್ ಶಾಲಾ ಸಭಾಂಗಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಅರೆಭಾಷೆ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಉಮರಬ್ಬ, ಶೈಕ್ಷಣಿಕ ಸಾಧನೆಯ ಮೂಲಕ ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕೆಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಹಿಂದುಳಿದ ಮತ್ತು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಸುರೇಶ್, ರಾಜ್ಯ ಸರಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಮುಂದೆ ಬರುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಪ್ರತಿಭಾ ಪುರಸ್ಕಾರಗಳ ಮೂಲಕ ವಿದ್ಯಾರ್ಥಿಗಳನ್ನು ಪೋ›ತ್ಸಾಹಿಸುವ ಕಾರ್ಯ ಹೆಚ್ಚು ಹೆಚ್ಚು ನಡೆಯಬೇಕೆಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಡಗು ಬ್ಯಾರೀಸ್ ವೆಲ್ಫೆàರ್ ಟ್ರಸ್ಟ್‌ನ ಅಧ್ಯಕ್ಷ ಶಂಸುದ್ದೀನ್ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು.
Related Articles
Advertisement
ಕುಮಾರಿ ಮೆಹ್‌ಕಾ ಫಾತಿಮ ಹಾಡು ಹೇಳಿ ಗಮನ ಸೆಳೆದರು. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಎಂ.ಇ. ಮೊಹಮ್ಮದ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಎಂ. ಅಬ್ದುಲ್ಲ ವಂದಿಸಿದರು. ಉಪಾಧ್ಯಕ್ಷ ಎಸ್.ಐ ಮುನೀರ್ ಕಾರ್ಯಕ್ರಮ ನಿರ್ವಹಿಸಿದರು.