ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಗುರುವಾರ ಮಂಡಿಸಿದ ಬಜೆಟ್ ನಲ್ಲಿ ರಾಮನಗರ ಜಿಲ್ಲೆಯಲ್ಲಿರುವ ಐತಿಹಾಸಿಕ ರಾಮನಗರ ಬೆಟ್ಟದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡುವ ಬಗ್ಗೆ ಘೋಷಿಸಿದ್ದಾರೆ. ಮಾತ್ರವಲ್ಲದೆ ಐತಿಹಾಸಿಕ ಸ್ಥಳಗಳಿಗೆ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ.
ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಮೂಲ ಸೌಕರ್ಯ ಒದಗಿಸಲು ನೂರು ಕೋಟಿ ರೂ.
ಪ್ರಸಾದ್ ಯೋಜನೆಯಡಿ ಮೈಸೂರಿನ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ದಿ
ಸ್ವದೇಶ್ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ, ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶಾಶ್ವತ ಸೌಲಭ್ಯ
Related Articles
ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಳಿರುವ ತಾಣಗಳ ಪ್ರವಾಸಿ ಸರ್ಕಿಟ್
ಸಂತ ಸೇವಾಲಾಲ್ ಜನ್ಮಸ್ಥಳ ದಾವಣಗೆರೆಯ ಸೊರಗೊಂಡನಕೊಪ್ಪ ಅಭಿವೃದ್ಧಿಗೆ 5 ಕೋಟಿ ರೂ.
ದಾವಣಗೆರೆಯ ಚನ್ನಗಿರಿಯ ಹೋದಿಗ್ಗೆರೆಯಲ್ಲಿರುವ ಷಹಾಜಿ ಮಹಾರಾಜ್ ಸಮಾಧಿ ಸ್ಥಳ ಅಭಿವೃದ್ಧಿಗೆ 5 ಕೋಟಿ ರೂ.
ಹಾವೇರಿಯ ಬಂಕಾಪುರದಲ್ಲಿರುವ 12 ನೇ ಶತಮಾನದ 101 ಕಂಬಗಳಿರುವ ನಗರೇಶ್ವರ ದೇವಸ್ಥಾನ ಅಭಿವೃದ್ಧಿ
ನಂದಿ ಬೆಟ್ಟದಲ್ಲಿ ರೋಪ್ ವೇ ಈ ವರ್ಷವೇ ಪೂರ್ಣ
398 ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರೋತ್ಸಾಹ ಧನ 2 ಸಾವಿರದಿಂದ 5ಸಾವಿರಕ್ಕೆ ಏರಿಕೆ
ಹಂಪಿ, ವಿಜಯಪುರದ ಗೋಲ್ ಗುಂಬಜ್, ಚಿಕ್ಕಬಳ್ಳಾಪುರದ ಭೋಗ ನಂದೀಶ್ವರ ದೇಗುಲ, ಬಾದಾಮಿ ಗುಹೆಗಳು, ಕಿತ್ತೂರು, ಬೀದರ್ ಕೋಟೆಗಳಲ್ಲಿ ಅತ್ಯಾಧುನಿಕ ಬೆಳಕಿನ ವ್ಯವಸ್ಥೆ ತ್ರೀ ಡಿ ಪ್ರೊಜೆಕ್ಷನ್ ಮ್ಯಾಪಿಂಗ್ ಗಾಗಿ 60 ಕೋಟಿ ರೂ. ಅನುದಾನ
ರಾಜ್ಯದ ವಿವಿಧ ಸ್ಮಾರಕಗಳ ತ್ರೀ ಡಿ ಪ್ರೊಜೆಕ್ಷನ್ ಮ್ಯಾಪಿಂಗ್ ಲೇಸರ್ ಸ್ಕ್ಯಾನಿಂಗ್ ಮಾಡಿ ಡಿಜಿಟಲೀಕರಣಗೊಂಡ ಮೊದಲ ರಾಜ್ಯ ಎಂಬ ಹೆಗ್ಗಳಿಕೆ
ಅಡಾಪ್ಟ್ ಎ ಮೂವ್ಮೆಂಟ್ ಅಡಿಯಲ್ಲಿ ವಿಜಯಪುರದ ತಾಜ್ ಬಾವಡಿ ಆನೆಗುಂದಿಯ ಗಗನ್ ಮಹಲ್ ಸ್ಮಾರಕಗಳ ಸಂರಕ್ಷಣೆಗೆ ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ
ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳ ರಕ್ಷಣೆ, ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ಎರಡೂವರೆ ಎಕರೆ ಜಗದಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಜ್ಯ ವಸ್ತು ಸಂಗ್ರಹಾಲಯ ಮತ್ತು ಕಲಾ ಗ್ಯಾಲರಿ.
ಹೊನ್ನಾವರದಲ್ಲಿ ರಾಣಿ ಚೆನ್ನಭೈರಾದೇವಿ ಸ್ಮಾರಕ ಉದ್ಯಾನ
ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್ ನಲ್ಲಿ ಮೂಲಭೂತ ಸೌಕರ್ಯ ವೃದ್ಧಿಗೆ ಕ್ರಮ
ರಾಮನಗರದ ಮಂಚನಬೆಲೆ ಜಲಾಶಯದ ಹಿನ್ನೀರಿನಲ್ಲಿ 10 ಎಕರೆ ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಜಂಗಲ್ ಲಾಡ್ಜಸ್ & ರೆಸಾರ್ಸ್ಟ್ ಮೂಲಕ ಒಂದು ರೆಸಾರ್ಟ್
ಕಲಬುರಗಿಯ ಸನ್ನತಿ-ಚಂದ್ರಲಾಂಬಾ, ಗಾಣಗಾಪುರ ದತ್ತಾತ್ರೇಯ ಮತ್ತು ಬನವಾಸಿಯ ಮಧುಕೇಶ್ವರ ದೇವಾಲಯ ಅಭಿವೃದ್ಧಿ
ಸೇಡಂ ನ ಮಳಖೇಡ ಕೋಟೆ ಸಂರಕ್ಷಣೆಗೆ 20 ಕೋಟಿ ರೂ.