ಶಿಡ್ಲಘಟ್ಟ : ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಅಭೂತಪೂರ್ವ ಯಶಸ್ವಿ ಕಂಡ ನಂತರ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ 75ನೇ ಅಮೃತ ಮಹೋತ್ಸವದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಣ ಡಿಕೆ ಶಿವಕುಮಾರ್ ಅವರಿಗೆ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ಜಂಗಮ ಕೊಟ್ಟೆ ವೃತ್ತದಲ್ಲಿ ಇಬ್ನರು ನಾಯಕರ ವಾಹನವನ್ನು ನಿಲ್ಲಿಸಿ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡುವ ಮೂಲಕ ಅಭಿಮಾನವನ್ನು ಮೆರೆದಿದರಲ್ಲದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ಪರವಾಗಿ ಜೈಕಾರದ ಘೋಷಣೆಗಳು ಮುಳುಗಿದವು.
ನಂತರ ಎಚ್ ಕ್ರಾಸಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರನ್ನು ಸಹ ಅದ್ದೂರಿಯಾಗಿ ಸ್ವಾಗತಿಸಿ ಸಂಭ್ರಮಿಸಿದರು ಇಬ್ಬರು ನಾಯಕರ ಪರವಾಗಿ ಜೈಕಾರದ ಘೋಷಣೆಗಳು ಕೇಳಿ ಬಂದವು ಅಭಿಮಾನಿಗಳು ಸೇಬಿನ ಹಾರ ಹಾಕಿ ಅಭಿನಂದಿಸಿದರು.
ಇದನ್ನೂ ಓದಿ : ಬಿಹಾರ: ಅಗ್ನಿಪಥ್ ವಿರುದ್ಧ ಪ್ರತಿಭಟನೆ, ಹಿಂಸಾಚಾರ-ಬಂಧಿತ ಮಾವೋವಾದಿ ಮುಖಂಡ ಹೇಳಿದ್ದೇನು?
ಎಚ್ ಕ್ರಾಸ್ ಮಾರ್ಗದ ಮೂಲಕ ಚಿಂತಾಮಣಿ ತಾಲೂಕಿನ ಕೈವಾರಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಿದರು ದಾರಿಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಜೈಕಾರದ ಘೋಷಣೆಗಳು ಕೂಗಿದ್ರಲ್ಲದೆ ಇಬ್ಬರೂ ನಾಯಕರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಹಸ್ತಲಾಘವ ಮಾಡುವ ಮೂಲಕ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ಶಾಸಕ ವಿ ಮುನಿಯಪ್ಪ ಗೌರಿಬಿದನೂರು ಶಾಸಕ ಎನ್ ಹೆಚ್ ಶಿವಶಂಕರ ರೆಡ್ಡಿ ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್ ಸಂಪಂಗಿ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾಕ್ಟರ್ ಎಂ.ಸಿ. ಸುಧಾಕರ್ ರೆಡ್ಡಿ, ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ, ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್ ಎಮ್ ಮುನಿಯಪ್ಪ, ಅಶ್ಪತ್ ಗೌಡ, ದೇವರಾಜ್, ಡಿ ಬಿ ಚನಕೃಷ್ಣಪ್ಪ, ತಮ್ಮಣ್ಣ ನಾಗೇಶ್, ಬಸಪ್ಪ ,ಮುನಿ ಆಂಜನೇಯ, ಸುರೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.