Advertisement

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನ

05:39 PM Jan 28, 2022 | Team Udayavani |

ಬೆಂಗಳೂರು : ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡ ಬಳಿಕ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮೌನಕ್ಕೆ ಶರಣಾಗಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

Advertisement

ಮಾಜಿ ಪ್ರಾಧಾನ ಮಂತ್ರಿ ದೇವೇಗೌಡ ಮಾಜಿ‌ ಮುಖ್ಯಮಂತ್ರಿ ಕುಮಾರಸ್ವಾಮಿ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯಡಿಯೂರಪ್ಪ ಅವರಿಗೆ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಮಗಳಾದ ಸೌಂದರ್ಯ(30) ವಸಂತ ನಗರದ ಫ್ಯಾಟ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 9 ತಿಂಗಳ ಪುಟ್ಟ ಮಗು ಇದ್ದರೂ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ನೋವು, ಸಂಕಟವನ್ನು ನಾನು ಕಂಡಿದ್ದೇನೆ ; ಸಿದ್ದರಾಮಯ್ಯ 

ನನ್ನ ಧೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸಿಗೆ ಘಾಸಿಯಾಯಿತು. ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದಾಗುವ ನೋವು, ಸಂಕಟವನ್ನು ನಾನು ಕಂಡಿದ್ದೇನೆ, ಅನುಭವಿಸಿದ್ದೇನೆ. ಸೌಂದರ್ಯ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

Advertisement

ಇದನ್ನೂ ಓದಿ :ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

ಮೇಲ್ನೋಟಕ್ಕೆ ಕೌಟುಂಬಿಕ ಸಮಸ್ಯೆ ಕಾರಣ ಎನ್ನಲಾಗಿದ್ದು, ಖಿನ್ನತೆಯಿಂದ ಬಳಲುತ್ತಿದ್ದರು ಎಂದೂ ಹೇಳಲಾಗಿದೆ.

ಮರಣೋತ್ತರ ಪರೀಕ್ಷೆಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ನಡೆಸಿ ಸೌಂದರ್ಯ ಮೃತದೇಹವನ್ನು ಪತಿ ನೀರಜ್ ಅವರ ಸ್ವಗ್ರಾಮ ಸೋಲದೇವನಹಳ್ಳಿ ಬಳಿಯ ಅಬ್ಬಿಗೆರೆ ಫಾರ್ಮ್ ಹೌಸ್ ನಲ್ಲಿ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ನೇಣು ಹಾಕಿಕೊಂಡ ಕಾರಣ ಕತ್ತಿನ ಭಾಗದಲ್ಲಿ ಮಾತ್ರ ಗಾಯವಿದೆ ಎಂದು ವೈದ್ಯರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯನ್ನು ತಹಶೀಲ್ದಾರ್ ಮತ್ತು ತನಿಖಾಧಿಕಾರಿಗೆ ನೀಡುವುದಾಗಿ ವೈದ್ಯರು ತಿಳಿಸಿದ್ದಾರೆ.

ಯಡಿಯೂರಪ್ಪ ಅವರು ಸೇರಿದಂತೆ ಅವರ ಕುಟುಂಬದ ಹೆಚ್ಚಿನವರು ಅನಿರೀಕ್ಷಿತ ಸಾವಿನಿಂದ ಕಂಗಾಲಾಗಿದ್ದಾರೆ. ಸಾವಿರಾರು ಮಂದಿ ಅಭಿಮಾನಿಗಳು, ಸಂಬಂಧಿಕರು ಅಂತ್ಯಕ್ರಿಯೆಗಾಗಿ ಆಗಮಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next