Advertisement

ಹೈಟೆಕ್‌ ಅಂಗನವಾಡಿ ಕಟ್ಟಡದಲ್ಲಿ “ಅಜ್ಜಿಮನೆ’

09:42 PM Aug 13, 2020 | mahesh |

ಮಹಾನಗರ: ಅಂಗನವಾಡಿಗೆ ತೆರಳಿದಾಗ ಮಕ್ಕಳಿಗೆ ಅಜ್ಜಿ ಮನೆಗೆ ಹೋದ ಭಾವನೆ ಬರುವಂತೆ ಮಾಡಲು ವ್ಯವಸ್ಥಿತ ಮತ್ತು ಸುಸಜ್ಜಿತ ಕಟ್ಟಡ ನಿರ್ಮಿಸುವ ಉದ್ದೇಶದಿಂದ “ಅಜ್ಜಿಮನೆ’ ಎಂಬ ಹೆಸರಿನ ಯೋಜನ ವರದಿ ಸಿದ್ಧಪಡಿಸಲಾಯಿತು. ಅದರಂತೆ ನಿರ್ಮಾಣವಾದ ಬೆಂಗರೆ ಅಂಗನವಾಡಿ ಕೇಂದ್ರದ ಉದ್ಘಾಟನೆ ಇತ್ತೀಚೆಗೆ ನೆರವೇರಿದೆ. ಕಾಟಿಪಳ್ಳ ಹಾಗೂ ಎದುರುಪದವು ಅಂಗನವಾಡಿ ಕೇಂದ್ರಗಳ ಕಾಮಗಾರಿ ಪೂರ್ಣಗೊಂಡು ಉದ್ಘಾಟ ನೆಗೆ ಸಜ್ಜಾಗಿವೆ. ಮಾದರಿ ಅಂಗನವಾಡಿ ಕಟ್ಟಡ ನಿರ್ಮಿಸುವ ಸಲುವಾಗಿ ಹಿಂದೆ ದ.ಕ. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕರಾಗಿದ್ದ ಡಾ| ಎಂ.ಆರ್‌. ರವಿ ಅವರು ನಿರ್ಮಿತಿ ಕೇಂದ್ರಕ್ಕೆ ಈ ಬಗ್ಗೆ ಒಂದು ಯೋಜನ ವರದಿಯನ್ನು ಸಲ್ಲಿಸಲು ಸೂಚಿಸಿದ್ದರು.

Advertisement

ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲಾºವಿ ಅವರು ತನ್ನ ತಂಡದೊಂದಿಗೆ ಈಗಾಗಲೇ ಜಿಲ್ಲೆಯಲ್ಲಿ ಸುಮಾರು 22 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಿದ್ದು, ಇದರ ಅನು ಭವದಿಂದ ಮಾದರಿ ಅಂಗನವಾಡಿ ಕಟ್ಟಡಕ್ಕೆ “ಅಜ್ಜಿಮನೆ’ ಎಂಬ ಯೋಜನ ವರದಿಯನ್ನು ತಯಾರಿಸಿದರು. ಈ ಯೋಜನೆಗೆ ಸಿಎಸ್‌ಆರ್‌ ಅಡಿ ಅನುದಾನ ನೀಡಲು ಜಿ.ಪಂ. ಮುಖ್ಯ ಕಾರ್ಯನಿರ್ವ ಹಣಾಧಿಕಾರಿಗಳು ಎಂಆರ್‌ಪಿಎಲ್‌ಗೆ

ಕೋರಿಕೆ ಸಲ್ಲಿಸಿದ್ದರು. ಇದನ್ನು ಪರಿಗಣಿಸಿ ಮಂಗಳೂರು ತಾಲೂಕಿನಲ್ಲಿ ಮೂರು ಅಂಗನವಾಡಿಗಳನ್ನು ನಿರ್ಮಿಸಲು ಎಂಆರ್‌ಪಿಎಲ್‌ ಸಂಸ್ಥೆಯು ಅನು ಮೋದನೆ ನೀಡಿತು. ಅದರಂತೆ ಮಂಗಳೂರು ದಕ್ಷಿಣ ಕ್ಷೇತ್ರದ ಬೆಂಗರೆ, ಮಂಗಳೂರು ಉತ್ತರ ಕ್ಷೇತ್ರದ ಕಾಟಿಪಳ್ಳ ಹಾಗೂ ಮೂಡುಬಿದಿರೆ ಕ್ಷೇತ್ರದ ಮೂಡುಶೆಡ್ಡೆ ಎದುರುಪದವಿನಲ್ಲಿ “ಅಜ್ಜಿಮನೆ’ ಅಂಗನವಾಡಿ ನಿರ್ಮಿಸಲು ಕಾಮಗಾರಿ ಪ್ರಾರಂಭಿಸಲಾಯಿತು. ಅಜ್ಜಿಮನೆ ಅಂಗನವಾಡಿ ಕೇಂದ್ರದ ವಿನ್ಯಾಸವನ್ನು ಭರತ್‌ರಾಮ್‌ ಜೆಪ್ಪು, ಗ್ರೀನ್ಮಾರ್ಕ್‌ ವಾಸ್ತುಶಿಲ್ಪ, ಒಳಾಂಗಣ ವಿನ್ಯಾಸ ಮಾಡಿದ್ದು, ನಿರ್ಮಿತಿ ಕೇಂದ್ರದ ಸಹಾಯಕ ಎಂಜಿನಿಯರ್‌ ನವಿತ್‌ ಅವರ ಮೇಲುಸ್ತುವಾರಿಯಲ್ಲಿ ಕಾಮಗಾರಿ ನಡೆಸಲಾಗಿದೆ.

ಏನೆಲ್ಲ ಇದೆ?
ಹೈಟೆಕ್‌ ಕಿಂಡರ್‌ ಗಾರ್ಡನ್‌ ನರ್ಸರಿಗಳನ್ನು ಮೀರಿಸುವಂತೆ ಹೊರಾಂಗಣ ಮತ್ತು ಒಳಾಂಗಣ ವಿನ್ಯಾಸ ಮಾಡಲಾಗಿದೆ. ಕಟ್ಟಡದಲ್ಲಿ ಮಕ್ಕಳಿಗೆ ಆಟವಾಡಲು ಅಂಗಳ, ಮಲಗಲು ಕೋಣೆ, ಅಡಿಗೆ ಮನೆ, ಚಾವಡಿ, ಶೌಚಾಲಯ ನಿರ್ಮಿಸಲಾಗಿದೆ. ಹೊರ ಆವರಣದಲ್ಲಿ ಪುಷ್ಪ ಉದ್ಯಾನವನ, ಎರೆಹುಳು ಗೊಬ್ಬರ ಘಟಕ, ಮಳೆ ನೀರು ಕೊಯ್ಲು ವ್ಯವಸ್ಥೆ ಅಲ್ಲದೆ ಸೋಲಾರ್‌ ದೀಪದೊಂದಿಗೆ ಸುಸಜ್ಜಿತ ಕಟ್ಟಡವನ್ನು 3 ಕಡೆಗಳಲ್ಲಿ ನಿರ್ಮಿಸಲಾಗಿದೆ. ಇಡೀ ಕಾಮಗಾರಿಯ ಸಂಪೂರ್ಣ ವೆಚ್ಚ ಸುಮಾರು 25 ಲಕ್ಷ ರೂ. ಮೊತ್ತದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಗೋಡೆ ಬರಹ ಮತ್ತು ಗ್ರಾಮೀಣ ಚಿತ್ರಕಲೆ ಮಾಡಲಾಗಿದೆ. ಕಟ್ಟಡದ ವಿದ್ಯುತ್‌ಗೆ ಎಲ್‌ಇಡಿ ದೀಪ ಅಳವಡಿಸಲಾಗಿದೆ. ಎರೆಹುಳು ಘಟಕದಿಂದ ಬರುವ ಗೊಬ್ಬರ ಬಳಸಿ ತರಕಾರಿ ಗಿಡಗಳನ್ನು ಬೆಳೆಯಲು ಸ್ಥಳಾವಕಾಶ ಕಲ್ಪಿಸಲಾಗಿದೆ. ಸುರಕ್ಷತೆಗಾಗಿ ಕಟ್ಟಡದ ಸುತ್ತ ಆವರಣ ಗೋಡೆ ನಿರ್ಮಿಸಲಾಗಿದ್ದು ಮಕ್ಕಳು ಸ್ವತ್ಛಂದವಾಗಿ ಆವರಣದೊಳಗೆ ಸಂಚರಿಸಬಹುದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next