Advertisement

ಕ್ಷೇತ್ರಕ್ಕೆ ಕೇಳಿದಷ್ಟು ಅನುದಾನ ನೀಡಿದ್ದಾರೆ ಸಿಎಂ

04:35 PM Nov 11, 2017 | |

ಇಂಡಿ: ಅಭಿವೃದ್ಧಿಯಿಂದ ವಂಚಿತವಾದ ಇಂಡಿ ಮತಕ್ಷೇತ್ರದ ಅಭಿವೃದ್ಧಿಗೆ ನಾನು ಕೇಳಿದಷ್ಟು ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಅದರಿಂದಲೇ ಇಷ್ಟು ಪ್ರಮಾಣದಲ್ಲಿ ಮತಕ್ಷೇತ್ರ ಅಭಿವೃದ್ಧಿಯಾಗಲು ಸಾಧ್ಯವಾಯಿತು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

Advertisement

ಪೊಲೀಸ್‌ ಪರೇಡ್‌ ಮೈದಾನದಲ್ಲಿ ಇಂಡಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಲೋಕಾರ್ಪಣೆ, ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ. ಪಾಟೀಲ ಅವರು ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅದರಿಂದ ಇಂದು ಈ ಭಾಗದ 31 ಹಳ್ಳಿಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಈಗ ಭುಂಯ್ನಾರ ಯೋಜನೆಯ ಮೂಲಕ 40 ಹಳ್ಳಿಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಈಗ ಆ ಯೋಜನೆಗೆ ಅನುಮತಿ ದೊರೆತಿದೆ ಎಂದರು.

ಇಂಡಿ ಭಾಗದ ನೀರಾವರಿಗೆ ಇಂಡಿ ಬ್ರ್ಯಾಂಚ್‌ ಕೆನಾಲ್‌, ಗುತ್ತಿ ಬಸವಣ್ಣ ಯೋಜನೆ, ಚಿಮ್ಮಲಗಿ ಏತ ನೀರಾವರಿ
ಯೋಜನೆ, ಮುಳವಾಡ ಏತ ನೀರಾವರಿ ಯೋಜನೆಗಳ ಮೂಲಕ ತಾಲೂಕಿನ ಬಹುತೇಕ ಹಳ್ಳಿಗಳಿಗೆ ನೀರಾವರಿ
ಮಾಡಲಾಗುತ್ತಿದೆ ಎಂದರು. ಪಟ್ಟಣದಲ್ಲಿನ ಬಡವರಿಗೆ ಅನುಕೂಲ ಕಲ್ಪಿಸಲು ಇಂದಿರಾ ಕ್ಯಾಂಟೀನ್‌ ಕಾರ್ಯಾರಂಭ
ಮಾಡಲಾಗುತ್ತಿದೆ. ಅದರಲ್ಲಿ ಕೇವಲ 10 ರೂ.ಗೆ ಊಟ, 5 ರೂ.ಗೆ ಬೆಳಗಿನ ಉಪಹಾರ ಸಿಗಲಿದೆ ಎಂದ ಅವರು,
2018ರ ಚುನಾವಣೆಯಲ್ಲೂ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಲಿದ್ದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next