Advertisement

ಕಿತ್ತೂರು ಅಭಿವೃದ್ಧಿ-ಉತ್ಸವಕ್ಕೆ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

04:36 PM Oct 03, 2024 | Team Udayavani |

■ ಉದಯವಾಣಿ ಸಮಾಚಾರ
ಬೆಂಗಳೂರು: ಬ್ರಿಟಿಷರ ವಿರುದ್ಧ ಕಿತ್ತೂರು ರಾಣಿ ಚನ್ನಮ್ಮ ಸಾಧಿಸಿದ ಗೆಲುವಿಗೆ 200 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅಕ್ಟೋಬರ್‌ 23ರಿಂದ ಮೂರು ದಿನಗಳ ಕಾಲ ಕಿತ್ತೂರಿನಲ್ಲಿ ನಡೆಯುವ “ಕಿತ್ತೂರು ವಿಜಯ ಉತ್ಸವ’ ಮತ್ತು ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರ ಸಕಲ ನೆರವು ಹಾಗೂ ಅಗತ್ಯ ಅನುದಾನವನ್ನೂ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ನಗರದಲ್ಲಿ ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ
ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವದ 200ನೇ ವರ್ಷದ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು.

ಬ್ರಿಟಿಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು. ದೇಶದ ಎಲ್ಲ ರಾಣಿಯರಿಗಿಂತ ಕಿತ್ತೂರು ರಾಣಿ ಚನ್ನಮ್ಮ ಮುಂಚೂಣಿಯಲ್ಲಿರುತ್ತಾರೆ ಎಂದರು. ಕಿತ್ತೂರು ರಾಣಿ ಚನ್ನಮ್ಮನವರು ನಮಗೆಲ್ಲ ಸ್ವಾಭಿಮಾನದ ಸಂಕೇತ . ಬ್ರಿಟಿಷರು ಜಾರಿಗೆ ತಂದಿದ್ದ ತೆರಿಗೆ ನೀತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಕಿತ್ತೂರು ರಾಣಿ ಚನ್ನಮ್ಮ ಅವರು ವಿರೋಧ ಮಾಡಿದ್ದರು. ತೆರಿಗೆ ಕೊಡಲ್ಲ ಅಂತ ಬ್ರಿಟಿಷರಿಗೆ ನೇರವಾಗಿ ಹೇಳಿದವರು.

ಮೊದಲನೇ ಯುದ್ಧದಲ್ಲಿ ಚನ್ನಮ್ಮ ಅವರಿಗೆ ಜಯವಾಗುತ್ತದೆ. ಎರಡನೇ ಯುದ್ಧಕ್ಕೆ ಬ್ರಿಟಿಷರು ಹೆಚ್ಚು ಸೈನ್ಯ ತೆಗೆದುಕೊಂಡು ಬಂದಿದ್ದರಿಂದ ಕಿತ್ತೂರಿಗೆ ಸೋಲಾಗುತ್ತದೆ. ಬ್ರಿಟಿಷರು ಕಿತ್ತೂರನ್ನು ಆಕ್ರಮಿಸಿಕೊಳ್ಳುತ್ತಾರೆ. ಚನ್ನಮ್ಮ ಅವರನ್ನು ಸೆರೆ ಹಿಡಿಯುತ್ತಾರೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ 1924ರ ಡಿಸೆಂಬರ್‌ 24ರಂದು ಕಾಂಗ್ರೆಸ್‌ ಅಧಿವೇಶ ನಡೆಯಿತು. ಇದರ ಶತಮಾನೋತ್ಸವ ಆಚರಣೆ ಮಾಡುತ್ತಿದ್ದೇವೆ. ಮೊದಲ ಶತಮಾನೋತ್ಸವ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತದೆ. ಸಚಿವ ಎಚ್‌. ಕೆ.ಪಾಟೀಲ್‌ ಅವರು ಇದಕ್ಕೆ ಅಧ್ಯಕ್ಷರಾಗಿರುತ್ತಾರೆ. ಮಹಾತ್ಮ ಗಾಂಧಿಜಿಯವರು ಶಾಂತಿಯುತವಾಗಿ, ಸತ್ಯಾಗ್ರಹದಿಂದದಿಂದ ಬ್ರಿಟಿಷರನ್ನು ದೇಶದಿಂದ
ಓಡಿಸಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಹೇಳಿದರು.

Advertisement

ಈ ವೇಳೆ ಸಚಿವರಾದ ಸತೀಶ್‌ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್‌, ಎಚ್‌.ಕೆ.ಪಾಟೀಲ್‌ ,ಪ್ರಿಯಾಂಕ್‌ ಖರ್ಗೆ, ಕಿತ್ತೂರು ಕ್ಷೇತ್ರದ ಶಾಸಕ  ಬಾಬಾಸಾಹೇಬ್‌ ಪಾಟೀಲ್‌ , ಶಾಸಕರಾದ ರಿಜ್ವಾನ್‌ ಅರ್ಷದ್‌, ರಾಜು ಕಾಗೆ, ಎನ್‌ .ಎ.ಹ್ಯಾರಿಸ್‌, ವಿಧಾನ ಪರಿಷತ್‌ನ ಮುಖ್ಯ ಸಚೇತಕರಾದ ಸಲೀಂ ಅಹಮದ್‌, ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ, ಸರ್ಕಾ ಲರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಉನ್ನತ ಅಧಿಕಾರಿಗಳು ಸೇರಿದಂತೆ ಬೆಳಗಾವಿ ಜಿಲ್ಲಾ ಧಿಕಾರಿ ಮೊಹಮ್ಮದ್‌ ರೋಷನ್‌, ಜಿಪಂ ಇಒ ರಾಹುಲ್‌ ಶಿಂಧೆ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ ಮತ್ತಿತರರು ಇದ್ದರು. ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಜ್ಯೋತಿಯಾತ್ರೆಯು ಅ.23 ರಂದು ಚನ್ನಮ್ಮನ ಕಿತ್ತೂರು ತಲುಪಲಿದೆ.

Advertisement

Udayavani is now on Telegram. Click here to join our channel and stay updated with the latest news.

Next