ಬೆಂಗಳೂರು: ಬ್ರಿಟಿಷರ ವಿರುದ್ಧ ಕಿತ್ತೂರು ರಾಣಿ ಚನ್ನಮ್ಮ ಸಾಧಿಸಿದ ಗೆಲುವಿಗೆ 200 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 23ರಿಂದ ಮೂರು ದಿನಗಳ ಕಾಲ ಕಿತ್ತೂರಿನಲ್ಲಿ ನಡೆಯುವ “ಕಿತ್ತೂರು ವಿಜಯ ಉತ್ಸವ’ ಮತ್ತು ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರ ಸಕಲ ನೆರವು ಹಾಗೂ ಅಗತ್ಯ ಅನುದಾನವನ್ನೂ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Advertisement
ನಗರದಲ್ಲಿ ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸವದ 200ನೇ ವರ್ಷದ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು.
Related Articles
ಓಡಿಸಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಹೇಳಿದರು.
Advertisement
ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಎಚ್.ಕೆ.ಪಾಟೀಲ್ ,ಪ್ರಿಯಾಂಕ್ ಖರ್ಗೆ, ಕಿತ್ತೂರು ಕ್ಷೇತ್ರದ ಶಾಸಕ ಬಾಬಾಸಾಹೇಬ್ ಪಾಟೀಲ್ , ಶಾಸಕರಾದ ರಿಜ್ವಾನ್ ಅರ್ಷದ್, ರಾಜು ಕಾಗೆ, ಎನ್ .ಎ.ಹ್ಯಾರಿಸ್, ವಿಧಾನ ಪರಿಷತ್‌ನ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಸರ್ಕಾ ಲರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉನ್ನತ ಅಧಿಕಾರಿಗಳು ಸೇರಿದಂತೆ ಬೆಳಗಾವಿ ಜಿಲ್ಲಾ ಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಇಒ ರಾಹುಲ್ ಶಿಂಧೆ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ ಮತ್ತಿತರರು ಇದ್ದರು. ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಜ್ಯೋತಿಯಾತ್ರೆಯು ಅ.23 ರಂದು ಚನ್ನಮ್ಮನ ಕಿತ್ತೂರು ತಲುಪಲಿದೆ.