Advertisement

ಮುಂದಿನ ಬಜೆಟ್‌ನಲ್ಲಿ ಪೊಲೀಸರ ವಸತಿಗೃಹ ನಿರ್ಮಾಣಕ್ಕೆ ಅನುದಾನ: ಬೊಮ್ಮಾಯಿ

10:26 AM Oct 17, 2019 | Team Udayavani |

ಹಾವೇರಿ: ಮುಂದಿನ ಬಜೆಟ್‌ನಲ್ಲಿ ಪೊಲೀಸರಿಗೆ ವಸತಿಗೃಹ ನಿರ್ಮಾಣಕ್ಕೆ ದೊಡ್ಡ ಪ್ರಮಾಣದ ಅನುದಾನ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ತಾಲೂಕಿನ ನಾಗನೂರು ಗ್ರಾಮದಲ್ಲಿ ನೆರೆ ಸಂತ್ರಸ್ತರ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಔರಾದಕರ್ ವರದಿಗೆ ಕೆಲ ಬದಲಾವಣೆ ಮಾಡಬೇಕಿದೆ. ವರದಿಯಲ್ಲಿ ಅಗ್ನಿಶಾಮಕದಳ ಸಿಬ್ಬಂದಿ ಸೇರ್ಪಡೆಗೊಳಿಸಿ ವರದಿ ಅಂತಿಮಗೊಳಿಸಿ ಜಾರಿಗೊಳಿಸಲಾಗುವುದು ಎಂದರು.

ಈ ಬಾರಿ ಹಿಂದೆಂದೂ ಕಾಣದ ಭೀಕರ ನೆರೆ ಹಾವಳಿಗೆ ರಾಜ್ಯ ತುತ್ತಾಗಿದ್ದು ಅದಕ್ಕೆ ದೊಡ್ಡ ಪ್ರಮಾಣದಲ್ಲಿ ರಾಜ್ಯ ಸರ್ಕಾರ ಪರಿಹಾರ ಹಣ ಕೊಟ್ಟಿದೆ. ಸದ್ಯದ ಪರಿಸ್ಥಿತಿ ಹೀಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ರೈತರ ಸಾಲ ಮನ್ನಾ ಇಲ್ಲ ಎಂದು ಹೇಳಿದ್ದಾರೆ ಎಂದು ಬೊಮ್ಮಾಯಿ ಪ್ರತಿಕ್ರಿಯಿಸಿದರು.

ಉಪ ಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಲ್ಲಿ ಸಭೆ ನಡೆಸಿದ್ದು ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತೇವೆ. ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಭಗೊಂಡ ಅಭ್ಯರ್ಥಿಗಳ ಮನವೊಲಿಸುತ್ತಿದ್ದೇವೆ. ಮನವೊಲಿಸುವಲ್ಲಿ ಯಶಸ್ವಿಯೂ ಆಗುತ್ತೇವೆಂಬ ವಿಶ್ವಾಸವಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next