Advertisement

ಕೆರೆ ತುಂಬಿಸುವ ಯೋಜನೆಗೆ ಅನುದಾನ

05:30 PM Mar 05, 2021 | Team Udayavani |

ಹೊನ್ನಾಳಿ: ವಿಧಾನಸಭಾ ಕ್ಷೇತ್ರದಲ್ಲಿ ಬರುವ ಹೊಸೂರು ಮತ್ತು ಬೆನಕನಹಳ್ಳಿ ಸಮೀಪದ ತುಂಗಭದ್ರಾ ನದಿಯಿಂದ ಏತ ನೀರಾವರಿಯೋಜನೆ  ಮೂಲಕ ಕ್ಷೇತ್ರದ ವ್ಯಾಪ್ತಿಯ 24 ಕೆರೆಗಳ ನೀರು ತುಂಬಿಸುವ ಯೋಜನೆಗೆ ಜಲ ಸಂಪನ್ಮೂಲ ಇಲಾಖೆಯಿಂದ 48 ಕೋಟಿ ರೂ.ಅನುದಾನವನ್ನು ಸಚಿವ ಸಂಪುಟದ ಅನುಮೋದನೆಯೊಂದಿಗೆ ಸರ್ಕಾರದಿಂದ ಮಂಜೂರ ಮಾಡಿಸಲಾಗಿದೆ ಎಂದುಸಿಎಂ ರಾಜಕೀಯ ಕಾರ್ಯದರ್ಶಿ  ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

Advertisement

ಬೆಂಗಳೂರಿನಿಂದ ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳು ವ್ಯಾಪ್ತಿಯ ಹೊಸಕೊಪ್ಪ, ಫಲವನಹಳ್ಳಿಯಿಂದ ಕ್ಷೇತ್ರದ ಗಡಿ ಗ್ರಾಮಗಳಾದ ಮುಸ್ಸೇನಾಳ, ಟಿ.ಗೋಪಗೊಂಡನಹಳ್ಳಿ, ನರಗಿನಕೆರೆ, ಚಟ್ನಹಳ್ಳಿ, ಸೋಗಿಲು, ಸವಳಂಗ, ಜೋಗ, ಜಯನಗರ, ಬೆಳಗುತ್ತಿ, ಮಲ್ಲಿಗೇನಹಳ್ಳಿ, ಹಾಗೂ ಇತರೆ ಒಟ್ಟು 61 ಗ್ರಾಮಗಳಿಗೆ ಬಹುಗ್ರಾಮ ನೀರಿನಯೋಜನೆಯನ್ನು ಅನುಷ್ಠಾನಗೊಳಿಸಲು  ಅನುದಾನ ಮಂಜೂರು ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು. ಈ ಯೋಜನೆಯನ್ನು ರೂ.69.27 ಕೋಟಿ ಅಂದಾಜು ವೆಚ್ಚದಲ್ಲಿ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲು ಮಾ.3ರಂದು ಬುಧವಾರ ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಹೊನ್ನಾಳಿ ತಾಲೂಕಿನ ಗೋವಿನಕೋವಿ ಹಾಗೂ ಹನುಮಸಾಗರ ಗ್ರಾಮಗಳ ಸಮೀಪದ ತುಂಗಭದ್ರಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಅವಳಿ ತಾಲೂಕುಗಳ 94 ಕೆರೆಗಳನ್ನು ತುಂಬಿಸುವ ರೂ.434 ಕೋಟಿ ಯೋಜನೆಗೆ ಮಾರ್ಚಿ ಅಂತ್ಯದೊಳಗೆ ಅನುಮೋದನೆ ಪಡೆದು ಟೆಂಡರ್‌ ಮೂಲಕ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.

ಈ ಪ್ರಮುಖ ಯೋಜನೆಗಳನ್ನು ನನ್ನ ಮತಕ್ಷೇತ್ರದ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಅಭಿವೃದ್ಧಿಗೆ ಹಾಗೂ ಕ್ಷೇತ್ರದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕಾರಣಕರ್ತರಾದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವರಾದ ಕೆ.ಎಸ್‌. ಈಶ್ವರಪ್ಪ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರುಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next