Advertisement
ಲಿಂಗಸುಗೂರು ತಾಲೂಕು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಶುಕ್ರವಾರ ಪಟ್ಟಣದ ಈಶ್ವರ ದೇವಸ್ಥಾನದಲ್ಲಿನಡೆದ ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಮ್ಮರವಾಗಿ ಬೆಳೆಯುತ್ತಿವೆ. ಇದರಿಂದ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಉತ್ತಮ ಅವಕಾಶ ಕಲ್ಪಿಸಿದಂತಾಗಿದೆ. ಸ್ಪರ್ದಾತ್ಮಕ ಯುಗದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ನಡೆಸುವುದು ಕಷ್ಟಕರವಾಗಿದೆ. ಇದರ ನಡುವೆ ಗುಣಮಟ್ಟದ ಶಿಕ್ಷಣ ನೀಡುವುದು ಕೂಡ ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.
ನಡುವೆ ಯಾವುದೇ ಸಮಸ್ಯೆ ಇರಬಾರದು. ಸಹಕಾರ ಮನೋಭಾವನೆಯಿಂದ ಸಂಸ್ಥೆಗಳನ್ನು ನಡೆಸಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಇಲ್ಲದಿದ್ದರೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ನೀಡಿ ಸಮಾಜದಲ್ಲಿ ಉತ್ತಮ ನಾಗರಿಕನ್ನಾಗಿ ರೂಪಿಸುವ ಹೊಣೆ ಶಿಕ್ಷಕರ ಮೇಲಿದೆ ಎಂದರು. ತಾಪಂ ಅಧ್ಯಕ್ಷೆ ಶ್ವೇತಾ ಪಾಟೀಲ, ಬಿಇಒ ಚಂದ್ರಶೇಖರ ಭಂಡಾರಿ, ಒಕ್ಕೂಟದ ತಾಲೂಕು ಅಧ್ಯಕ್ಷ ಪ್ರಭುರಾಜ ಹವಾಲ್ದಾರ, ಒಕ್ಕೂಟದ ಗೌರವಾಧ್ಯಕ್ಷ ಲಕ್ಷ್ಮಿಕಾಂತ ಕುಲಕರ್ಣಿ, ಮಸ್ಕಿ ಒಕ್ಕೂಟದ ಗೌರವಾಧ್ಯಕ್ಷ ಮಲ್ಲಿಕಾರ್ಜುನ ನಾಯಿನೇಗಲಿ ಇತರರು ಇದ್ದರು.