Advertisement

Grant Release: ಕುಂದ ಕನ್ನಡ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಬಿಡುಗಡೆ

01:53 AM Sep 14, 2024 | Team Udayavani |

ಕುಂದಾಪುರ: ಮಂಗಳೂರು ವಿವಿಯಲ್ಲಿ ಕುಂದ ಕನ್ನಡ ಅಧ್ಯಯನ ಪೀಠ ಸ್ಥಾಪನೆಗಾಗಿ ಸರಕಾರದಿಂದ ಮಂಗಳೂರು ವಿವಿಗೆ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ವಿವಿ ಸಿಂಡಿಕೇಟ್‌ ಸದಸ್ಯೆ ಜುಡಿತ್‌ ಮೆಂಡೊನ್ಸ್‌ ತಿಳಿಸಿದ್ದಾರೆ.

Advertisement

ಕುಂದ ಕನ್ನಡ ಅಧ್ಯಯನ ಪೀಠ ಸ್ಥಾಪನೆಗಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್‌ ಹೆಗ್ಡೆ ಈ ಹಿಂದೆ ಸರಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದಲ್ಲದೆ, ಅಧ್ಯಯನ ಪೀಠದ ಕಾರ್ಯಚಟುವಟಿಕೆ ಗಳನ್ನು ನಡೆಸಲು ಅನುಕೂಲವಾಗುವಂತೆ 1 ಕೋ. ರೂ. ಅನುದಾನ ನೀಡುವಂತೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು 50 ಲಕ್ಷ ರೂ. ಬಿಡುಗಡೆ ಮಾಡಲು ಆದೇಶಿಸಿದ್ದರು. ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಿಗೆ ಒಟ್ಟು 8.50 ಕೋ.ರೂ. ಬಿಡುಗಡೆಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next