Advertisement

ಅಂಬೇಡ್ಕರ್‌ ಭವನಕ್ಕೆ ಅನುದಾನ

11:53 AM Dec 09, 2019 | Suhan S |

ಯಲಹಂಕ: ರಾಜ್ಯದಲ್ಲಿ ಅಂಬೇಡ್ಕರ್‌ ಭವನಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

Advertisement

ಯಲಹಂಕ ಉಪನಗರದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ ಉದ್ಘಾಟನೆ ಮತ್ತು 400 ಕೋಟಿ ರೂ. ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ವರು ಮಾತನಾಡಿದರು.

ನಗರದಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗಾಗಿ ಬೆಂಗಳೂರು ಸಂಚಾರ ನಿರ್ವಹಣೆ ಪ್ರಾಧಿಕಾರ (ಬೆಂಗಳೂರು ಮೊಬಿಲಿಟಿ ಮ್ಯಾನೇಜ್ಮೆಂಟ್ ಅಥಾರಿಟಿಬಿಎಂಎಂಎ) ಸ್ಥಾಪಿಸಿ, ಸಂಯೋಜಿತ ಸಂಚಾರ ನಿರ್ವಹಣೆ ಜಾರಿಗೊಳಿಸುವುದು, 12 ಕಾರಿಡಾರ್‌ ರಸ್ತೆ ಗುರುತಿಸಿ ಪ್ರತ್ಯೇಕ ಸೈಕಲ್‌ ಹಾಗೂ ಬಸ್‌ ಪಥ ನಿರ್ಮಿಸಲು ಯೋಜನೆ, ಸಾರ್ವಜನಿಕ ಸಾರಿಗೆಗೆ ಒತ್ತು ನೀಡಿ ಸಂಚಾರ ದಟ್ಟಣೆ ತಗ್ಗಿಸಲಾಗುವುದು ಎಂದು ಹೇಳಿದರು.

ಮೆಟ್ರೋ 2ನೇ ಹಂತ, ಹೊರವರ್ತುಲ ರಸ್ತೆ ಕಾಮಗಾರಿ ಪೂರ್ಣಗೊಳಿಸಲು 2023ರ ಗಡುವು ಹಾಕಿಕೊಳ್ಳಲಾಗಿದೆ. ಇದೇ ವೇಳೆ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣವನ್ನು 2022ರ ವೇಳೆಗೆ ಪೂರ್ಣಗೊಳಿಸುವ ಗುರಿ ಸರ್ಕಾರದ ಮುಂದಿದೆ. ವಾಯು ಮಾಲಿನ್ಯ ನಿಯಂತ್ರಿಸಲು ಹೊಸಕೋಟೆವರೆಗೆ ಮೆಟ್ರೋ 3ನೇ ಹಂತದ ವಿಸ್ತರಣೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಸೇರಿ ಬೆಂಗಳೂರಿನ ಸಮಗ್ರ ಭಿವೃದ್ಧಿಗೆ ಸರ್ಕಾರ ಸಿದ್ಧತೆ ನಡೆಸಿದೆ. ಇದರೊಂದಿಗೆ ನಗರದ ರಸ್ತೆಗಳ ಅಭಿವೃದ್ಧಿಗೆ 465 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.

13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲವು: ಉಪಚುನಾಣೆಯಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಮುಂದಿನ ಮೂರೂವರೆ ವರ್ಷ ಸರ್ಕಾರ ಸುಭದ್ರವಾಗಿರಲಿದೆ. ಸೋಮವಾರ ಮಧ್ಯಾಹ್ನದ ನಂತರ ಫಲಿತಾಂಶ ಹೊರಬೀಳಲಿದ್ದು, 15 ಸ್ಥಾನಗಳಲ್ಲಿ 13 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ತಲಾ ಒಂದು ಸ್ಥಾನ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಸಿಎಂ, ಮುಂದಿನ ದಿನಗಳಲ್ಲಿ ಪ್ರತಿಪಕ್ಷಗಳ ಸಂಪೂರ್ಣ ಸಹಕಾರದೊಂದಿಗೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಶ್ರಮಿಸಲಿದೆ ಎಂದರು.

Advertisement

ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಯಲಹಂಕ ತಾಲೂಕಿನಲ್ಲಿ ಸರ್ಕಾರಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳಿಗೆ 94 ಸಿಸಿ ಅಡಿ ಹಕ್ಕು ಪತ್ರ ನೀಡಿರುವ ಮತ್ತು ತಾಲೂಕಿನ ಪ್ರತಿ ಗ್ರಾಮದಲ್ಲಿ ದಲಿತರಿಗೆ ಸ್ಮಶಾನ ಭೂಮಿ, ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಜಾಗ ಮೀಸಲಿಟ್ಟಿರುವ ತಾಲೂಕು ಆಡಳಿತದ ಕ್ರಮವನ್ನು ಶ್ಲಾಘಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ತತ್ವಾದರ್ಶಗಳಿಗೆ ಹೆಚ್ಚು ಆದ್ಯತೆ ನೀಡಿದ್ದು, ಅವುಗಳನ್ನು ಸಾಮಾನ್ಯ ಜನರವರೆಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಶಾಸಕ ಎಸ್‌.ಆರ್‌. ವಿಶ್ವನಾಥ್‌ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next