ಬಂಟ್ವಾಳ: ಎಲ್ಲರ ಶ್ರಮದಿಂದ ಊರಿನ ದೇವಸ್ಥಾನಗಳು ಸುಂದರವಾಗಿ ಮೂಡಿಬರಲು ಸಾಧ್ಯ. ಅಂತಹ ದೇವಸ್ಥಾನಗಳಿಗೆ ಸರಕಾರದಿಂದ ನೆರವು ಒದಗಿಸುವುದು ಜನಪ್ರತಿನಿಧಿಗಳಾದ ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಸರಪಾಡಿ ಕ್ಷೇತ್ರಕ್ಕೂ ಸರಕಾರದಿಂದ ಗರಿಷ್ಠ ಪ್ರಮಾಣದ ಅನುದಾನ ಒದಗಿಸಲಾಗುವುದು ಎಂದು ಸಾರಿಗೆ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.
ಅವರು ರವಿವಾರ ಸಂಜೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ 3ನೇ ದಿನದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು. ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಎಸ್. ಶೆಟ್ಟಿ ಸರಪಾಡಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯ ಸಂಚಾಲಕಿ ಬ್ರಹ್ಮಕುಮಾರಿ ವಿಶ್ವೇಶ್ವರಿ ಧಾರ್ಮಿಕ ಉಪನ್ಯಾಸ ನೀಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಅಲ್ಲಿಪಾದೆ ಚರ್ಚ್ ಧರ್ಮಗುರು ವಂ| ಫೆಡ್ರಿಕ್ ಮೊಂತೇರೊ, ದ.ಕ. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಾಜಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ, ಜಿ.ಪಂ. ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ. ಪದ್ಮಶೇಖರ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಕಾವೂರು ಸಿಎ ಬ್ಯಾಂಕ್ ಅಧ್ಯಕ್ಷ ಹರಿಶ್ಚಂದ್ರ, ಉದ್ಯಮಿಗಳಾದ ಪುರುಷೋತ್ತಮ ಶೆಟ್ಟಿ, ಚಂದ್ರಹಾಸ ಅಡ್ಯಂತಾಯ, ದಯಾನಂದ ಕಾರಂತ, ಸುನೀಲ್ ಬಿ. ಆಚಾರ್ಯ, ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ ಶೆಟ್ಟಿ, ನ್ಯಾಯವಾದಿ ದಯಾನಂದ ರೈ, ಮೊಕ್ತೇಸರರಾದ ಉಮೇಶ್ ಆಳ್ವ, ವಿಟಲ ಎಂ., ಬ್ರಹ್ಮಕಲಶ ಸಮಿತಿ ಪ್ರಧಾನ ಕಾರ್ಯದರ್ಶಿ ಸರಪಾಡಿ ಅಶೋಕ ಶೆಟ್ಟಿ ಉಪಸ್ಥಿತರಿದ್ದರು.
ಸಮ್ಮಾನ
ಕಾವೂರು ಮೊಗ್ರೋಡಿ ಕನ್‌ಸ್ಟ್ರಕ್ಷನ್ಸ್‌ನ ಮಾಲಕ ಸುಧಾಕರ ಶೆಟ್ಟಿ ಹಾಗೂ ಸಿವಿಲ್ ಎಂಜಿನಿಯರ್ ಶರತ್ ಗಾಣದಕೊಟ್ಯ ಅವರನ್ನು ಸಮ್ಮಾನಿಸಲಾಯಿತು. ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಪುರುಷೋತ್ತಮ ಪೂಜಾರಿ ಮಜಲು ವಂದಿಸಿದರು. ಉದಯ ಸಾಲಿಯಾನ್ ಕಾರ್ಯಕ್ರಮ ನಿರ್ವಹಿಸಿದರು.