Advertisement
ಸುದ್ದಿಗಾರರ ಜತೆ ಮಾತನಾಡಿ, ರಾಜ್ಯಗಳಿಗೆ ಅನುದಾನ ನಿಗದಿಪಡಿಸುವುದು ಕೇಂದ್ರ ಸರಕಾರವಲ್ಲ, ಹಣಕಾಸು ಆಯೋಗ. ಆಯೋಗಕ್ಕೆ ಸಮರ್ಪಕ ದಾಖಲೆ ನೀಡದೇ ನಿರ್ಲಕ್ಷ್ಯ ತೋರಿ ಬಳಿಕ ಕಡಿಮೆ ಹಣ ನೀಡಿದೆ ಎಂದು ಕೇಂದ್ರವನ್ನು ದೂರುವುದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಚಾಳಿಯಾಗಿದೆ. ಯುಪಿಎ ಅವಧಿಗೆ ಹೋಲಿಸಿದರೆ ಎನ್‌ಡಿಎ ಅವಧಿಯಲ್ಲಿಯೇ ರಾಜ್ಯಕ್ಕೆ ಅನುದಾನ ಹೆಚ್ಚು ಬಂದಿದೆ.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಎಷ್ಟು ಹಣವನ್ನು ಕರ್ನಾಟಕಕ್ಕೆ ಬಿಡುಗಡೆ ಮಾಡುತ್ತಿದ್ದರು ಎಂಬ ಅಂಕಿಅಂಶ ಬಿಡುಗಡೆ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ತಿರುಗೇಟು ನೀಡಿದ್ದಾರೆ.
Related Articles
Advertisement
ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕಾಂಗ್ರೆಸ್ ಅವಧಿಗಿಂತ ಹೆಚ್ಚು ಹಣವನ್ನು ಎನ್‌ಡಿಎ ನೀಡಿದೆ. ಯಾವುದೇ ಅನ್ಯಾಯ ಆಗಿಲ್ಲ. ಉತ್ತರ ಪ್ರದೇಶ ಮತ್ತು ಕರ್ನಾಟಕಕ್ಕೆ ಕೊಡುವ ಹಣವನ್ನು ಹೋಲಿಸಿ ಡಿ.ಕೆ. ಸುರೇಶ್ ಅವರು ಪ್ರತ್ಯೇಕ ರಾಜ್ಯ ಕೇಳುವ ಮಾತನಾಡಿದ್ದಾರೆ. ಡಿ.ಕೆ. ಸುರೇಶ್ ಮಾಡುವ ಆರೋಪ ಸರಿಯಲ್ಲ. ಇದು ಖಂಡನೀಯ ಎಂದರು.