Advertisement

ರಸ್ತೆ-ಚರಂಡಿ ನಿರ್ಮಾಣಕ್ಕೆ ಅಗತ್ಯ ಅನುದಾನ 

12:06 PM Aug 28, 2017 | Team Udayavani |

ತಿ.ನರಸೀಪುರ: ಅಭಿವೃದ್ಧಿಯಿಂದ ಕೈಬಿಟ್ಟು ಹೋಗಿದ್ದ ಗ್ರಾಮಗಳಲ್ಲಿ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲು ಹಾಗೂ ಸಾಮಾನ್ಯ ವರ್ಗಗಳ ಜನರು ವಾಸಿಸುವ ರಸ್ತೆಗಳನ್ನು ಸಿಮೆಂಟ್‌ ರಸ್ತೆಗಳನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

Advertisement

ತಾಲೂಕಿನ ಹಿರಿಯ ರಂಗಭೂಮಿ ಕಲಾವಿದ ಹೊನ್ನನಾಯಕ ಕರ್ನಾಟಕ ನಾಟಕ ಅಕಾಡೆಮಿಗೆ ನೂತನ ಸದಸ್ಯರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶಗಳ ಜನರಿಗೆ ಸಮರ್ಪಕವಾಗಿ ಮೂಲಭೂತ ಸೌಕರ್ಯವನ್ನು ಕಲ್ಪಿ$ಸಲು ಹಾಗೂ ನರಸೀಪುರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳನ್ನು ಅಭಿವೃದ್ಧಿಪಡಿಸಲು ಅಂತಿಮ ಹಂತದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅಗತ್ಯವಿರುವ ಅನುದಾನ ಮಂಜೂರು ಮಾಡಲಾಗಿದೆ ಎಂದರು.

ಈಗಾಗಲೇ ನೂರಾರು ಕೋಟಿ ರೂಗಳ ಅನುದಾನದಲ್ಲಿ ಹಲವಾರು ಶಾಶ್ವತ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ನರಸೀಪುರ ಕ್ಷೇತ್ರದಲ್ಲಿ 7 ದಿನ ಪ್ರವಾಸ ನಡೆಸಿ, ಗ್ರಾಮೀಣ ಸಮಸ್ಯೆಗಳನ್ನು ಸಂಪೂರ್ಣವಾಗಿ ಬಗೆಹರಿಸಲಾಗುವುದು.

ಅಲ್ಲದೆ, ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಮುಖಂಡರ ಅಹವಾಲು ಆಲಿಸಲಾಗುವುದು. ಬಾಕಿ ಉಳಿದ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಸಚಿವರನ್ನು ಸನ್ಮಾನಿಸಿ ಮಾತನಾಡಿದ ರಂಗಭೂಮಿಯ ಹಿರಿಯ ಕಲಾವಿದ ಹೊನ್ನನಾಯಕ, ಹಲವು ದಶಕಗಳಿಂದಲೂ ರಂಗಭೂಮಿಯಲ್ಲಿನ ಸೇವೆ ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಗಾಗಿ 10 ವರ್ಷಗಳಿಂದಲೂ ಅರ್ಜಿ ಸಲ್ಲಿಸುತ್ತಿದ್ದೇವೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತವಿದ್ದರೂ 4 ವರ್ಷಗಳಿಂದ ಪ್ರಶಸ್ತಿ ಕೈ ತಪ್ಪಿ ಹೋಗುತ್ತಿದೆ. ಈ ಬಾರಿಯಾದರೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸ್ಸು ಮಾಡಬೇಕೆಂದು ಮನವಿ ಮಾಡಿದರು. ತಾಪಂ ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ, ಗ್ರಾಪಂ ಸದಸ್ಯ ಉಕ್ಕಲಗೆರೆ ಎಂ.ರಾಜು, ಮಾಜಿ ಅಧ್ಯಕ್ಷ ಚಿದರವಳ್ಳಿ ಚಂದ್ರಶೇಖರ, ಮಾಜಿ ಉಪಾಧ್ಯಕ್ಷ ಮಂಜುನಾಥ್‌, ಮುಖಂಡರಾದ ಎ.ಶಿವಕುಮಾರ್‌, ದುಂಡಪ್ಪ ಇನ್ನಿತರರಿದ್ದರು.

Advertisement

ವಿಧಾನಸಭೆ ಚುನಾವಣೆಗೆ ಸುನೀಲ್‌ ಬೋಸ್‌ ಅಭ್ಯರ್ಥಿ!
ಮುಂದಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ನರಸೀಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸುನೀಲ್‌ ಬೋಸ್‌ ಸ್ಪರ್ಧಿಸುವುದು ಖಚಿತ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವು ರಾಜ್ಯದ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಬೇಕಾದರೂ ಸ್ಪರ್ಧಿಸಲು ಮುಕ್ತ ಅವಕಾಶವಿದೆ. ವರುಣ ಮತ್ತು ನರಸೀಪುರದಲ್ಲಿ ಯುವಕರಿಗೆ ಅವಕಾಶ ಮಾಡಿಕೊಡುತ್ತಿದ್ದೇವೆ.

ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಂಪರ್ಕದಲ್ಲಿದ್ದುಕೊಂಡು ಮೊಬೈಲ್‌ ಕರೆ ಸ್ವೀಕರಿಸಬೇಕು. ಕ್ಷೇತ್ರದಲ್ಲಿದ್ದುಕೊಂಡು ಪಕ್ಷದ ಸಂಘಟನೆಯನ್ನು ದುರ್ಬಲಗೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗಷ್ಟೇ ವಿದೇಶ ಪ್ರವಾಸ ಮುಗಿಸಿ ಬಂದ ಪುತ್ರ ಸುನೀಲ್‌ ಬೋಸ್‌ರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಾಕೀತು ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next