ಮೈಸೂರು: ಸಿಐಟಿಯು ನೇತೃತ್ವದಲ್ಲಿ ಗ್ರಾಪಂ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮೈಸೂರಿನ ಗನ್‌ಹೌಸ್ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಜಿಲ್ಲಾ ಪಂಚಾಯ್ತಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.
ಸಿಇಒಗೆ ಮನವಿ: ಕಳೆದೊಂದು ವರ್ಷದಿಂದ ಬಾಕಿ ಉಳಿದ ವೇತನ, ಇಎಫ್,ಎಂಎಸ್‌ಗೆ ಸೇರದಿರುವವರ ವೇತನವನ್ನು ತೆರಿಗೆ ಸಂಗ್ರಹದಲ್ಲಿ ಕೊಡಬೇಕು. ನಿವೃತ್ತಿ ಹೊಂದಿದ ನೌಕರರಿಗೆ ನಿವೃತ್ತಿ ಉಪಧನ ಕೊಡಬೇಕು. ಎಲ್ಲಾ ನೌಕರರಿಗೆ ಸೇವಾ ಪುಸ್ತಕ ತೆರೆಯಬೇಕು. ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಸೇವಾ ನಿಯಮಾವಳಿ ರಚಿಸಬೇಕು.
ನಿವೃತ್ತ ವೇತನ/ಗಳಿಗೆ ರಜೆ/ವಾರಕ್ಕೊಂದು ವೇತನ ಸಹಿತ ರಜೆ/ವೈದ್ಯಕೀಯ ವೆಚ್ಚ ಸರ್ಕಾರಿ ನೌಕರರಿಗೆ ನೀಡುವಂತೆ ಎಲ್ಲ ನೌಕರರಿಗೆ ನೀಡಬೇಕು. ಪಂಚಾಯ್ತಿ ನೌಕರರಿಂದ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು. ಹೊಸ ಬಿಲ್ ಕಲೆಕ್ಟರ್‌ಗಳಿಗೆ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿದರು. ಈ ಕುರಿತು ಜಿಪಂ ಸಿಇಒಗೆ ಮನವಿ ಸಲ್ಲಿಸಿದರು.
ಮೇಲ್ಮನವಿ ಸಲ್ಲಿಕೆ: ಅನೇಕ ವರ್ಷಗಳ ಹೋರಾಟದ ಫಲವಾಗಿ ನಾವು ಸರ್ಕಾರದಿಂದ ವೇತನ ಪಡೆಯಲು 2018ರ ಮಾರ್ಚ್‌ನಿಂದಷ್ಟೇ ಸಾಧ್ಯವಾಗಿದೆ. ಗ್ರಾಪಂ ನ 61 ಸಾವಿರ ನೌಕರರಿಗೆ ಈಗಿನ ಕನಿಷ್ಠ ಕೂಲಿ ಮತ್ತು ತುಟ್ಟಿಭತ್ಯೆ ಸೇರಿ ವೇತನ ನಿಡಲು 830 ಕೊಟಿ ರೂ. ಬೇಕಾಗುತ್ತದೆ. ವೇತನಕ್ಕಾಗಿ ಕಳೆದ ವರ್ಷ ನಿಗದಿಯಾಗಿದ್ದ ಹಣವನ್ನು ರೈತರ ಸಾಲ ಮನ್ನಾದ ಹೆಸರಿನಲ್ಲಿ 312 ಕೋಟಿ ರೂ. ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ.
ವೇತನಕ್ಕಾಗಿ ಬೇಕಾಗುವ ಹೆಚ್ಚುವರಿ ಹಣದ ಬಗ್ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಹೀಗಾಗಿ ಪ್ರಧಾನ ಕಾರ್ಯದರ್ಶಿ ಹೆಚ್ಚುವರಿ ಹಣಕ್ಕಾಗಿ ಹಣಕಾಸು ಇಲಾಖೆಗೆ ಪತ್ರ ಬರೆದಿ¨ªಾರೆ. ಹೆಚ್ಚುವರಿ ಹಣ ಬರದೆ ಗ್ರಾಪಂ ನೌಕರರ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ಹೆಚ್ಚುವರಿ ಹಣ ತಕ್ಷಣ ಬಿಡುಗಡೆ ಮಾಡಲು ಸರ್ಕಾರ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.
ಪಂಚಾಯ್ತಿ ನೌಕರರಿಂದ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು. ಹೊಸ ಬಿಲ್ ಕಲೆಕ್ಟರ್ ನೇಮಿಸಬೇಕು. ಬಿಲ್ ಕಲೆಕ್ಟರ್ ಹುದ್ದೆಯಿಂದ ಗ್ರೆಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಡ್ತಿ ನೀಡಲು 2019 ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು.
ಪವಿತ್ರ ಕೇಸಿನಲ್ಲಿ ಸುಪ್ರಿಂ ಕೋರ್ಟ್ ತೀರ್ಪು ಬಂದಿದ್ದರಿಂದ ಪಿಡಿಒ ಬಡ್ತಿ, ಗ್ರೆಡ್-1 ಬಡ್ತಿ ನೀಡಿ ಖಾಲಿಯಾದ ಗ್ರೆಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ನೇಮಕಾತಿ ಮಾಡಬೇಕು. ಕ್ಲರ್ಕ್, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್‌ಳನ್ನು ಬಡ್ತಿಗೆ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಕೆ.ಬಸವರಾಜು, ಲೋಕೇಶ್ ಕಿರುಜಾಜಿ, ಟಿ.ಎಸ್.ದಿನೇಶ್ ಇದ್ದರು.