ಬೆಂಗಳೂರು: ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸದೃಢವಾಗಲು ತಾವೇ ಸ್ವತಃ ಸಂಪನ್ಮೂಲ ಕ್ರೋಢೀಕರಣ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ರಾಜ್ಯದ ಎಲ್ಲ ಗ್ರಾಪಂ ಅಧ್ಯಕ್ಷರು-ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳ ಜತೆ ಸಂವಾದ ನಡೆಸಿದ ಅವರು , ಗ್ರಾಪಂಗಳಲ್ಲಿ ತೆರಿಗೆ ಸಂಗ್ರಹಿಸುವ ಬಿಲ್ ಕಲೆಕ್ಟರ್‌ಗಳು ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಇದರಲ್ಲಿ ವಿಫಲವಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಗ್ರಾಪಂಗಳು ಸ್ಥಳೀಯವಾಗಿ ಆಡಳಿತ ನಡೆಸುವುದನ್ನು ರೂಢಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯ ಸಂಪನ್ಮೂಲ ಕ್ರೂಢೀಕರಣ ಮಾಡಿ ಶಕ್ತವಾಗಬೇಕು. ರೇಷ್ಮೆ ಹುಳು ಸಾಕಾಣಿಕೆ, ಮನೆ ಕಟ್ಟಲು ಉದ್ಯೋಗ ಖಾತ್ರಿ ಯೋಜನೆಯಡಿ ನೆರವು ನೀಡಲು ಅಗತ್ಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ. ಅದಕ್ಕೆ ಒಪ್ಪಿಗೆ ದೊರೆತರೆ ನರೇಗಾ ಯೋಜನೆಯಡಿ ಅನುದಾನ ಸಿಗಲಿದೆ. ಗ್ರಾಪಂಗಳ ಸಮಗ್ರ ಅಭಿವೃದಿಟಛಿ ಯೋಜನೆ ಸಿದ್ಧಪಡಿಸಿ ಡಿ.15ರೊಳಗೆ ಕೇಂದ್ರ ಸರ್ಕಾರದ ವೆಬ್‌ಸೈಟ್‌ಗೆ ಅಳವಡಿಸಬೇಕು. ಇಲ್ಲದಿದ್ದರೆ 14ನೇ ಹಣಕಾಸು ಆಯೋಗದ ಅನುದಾನ ದೊರೆಯುವುದಿಲ್ಲ ಎಂದರು.