Advertisement
ಮಂಗಳವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿ.ಪಂ. ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾ.ಪಂ. ಸಭೆಗೆ ನಿಯೋಜಿಸಲ್ಪಡುವ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಿ ಅಲ್ಲಿನ ಸಮಸ್ಯೆಗಳ ನಿವಾರಣೆ ಬಗ್ಗೆ ಗಮನಹರಿಸಬೇಕು. ಅಕ್ಟೋಬರ್ ಮೊದಲ ವಾರದಲ್ಲಿ ಗ್ರಾ.ಪಂ. ಕೆಡಿಪಿ ಸಭೆಗಳನ್ನು ಆಯೋಜಿಸಬೇಕು ಎಂದು ಸಿಇಒ ಹೇಳಿದರು.
Related Articles
ಗ್ರಾ.ಪಂ.ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭಿಸಲು ಜಿಲ್ಲೆಗೆ 40 ಗುರಿ ನೀಡಲಾಗಿದೆ. ಈಗಾಗಲೇ 10 ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಘಟಕ ಪ್ರಾರಂಭಿಸಲು ಗ್ರಾ.ಪಂ.ಗಳು ಪ್ರಸ್ತಾವನೆ ಸಲ್ಲಿಸಬೇಕು. ಗ್ರಾ.ಪಂ. ವ್ಯಾಪ್ತಿಯ ಜನನಿಬಿಡ ಪ್ರದೇಶದಲ್ಲಿ ಸಮುದಾಯ ಶೌಚಾಲಯದ ಅಗತ್ಯವಿರುವ ಪಂಚಾಯತ್‌ಗಳು ಕೂಡ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಿಇಒ ತಿಳಿಸಿದರು.
Advertisement
ಅಲೆವೂರು ಗ್ರಾ.ಪಂ.ಗೆ 45 ಲ.ರೂ.ಅಲೆವೂರು ಗ್ರಾ.ಪಂ. ಕಟ್ಟಡ ಕಾಮಗಾರಿಗಾಗಿ 45 ಲ.ರೂ. ಅನುದಾನ ಮಂಜೂರಾಗಿದ್ದು, ಕೂಡಲೇ ಕಾಮಗಾರಿ ಕೈಗೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಸೂಚಿಸಿದರು. ಶೇ. 99 ಪಠ್ಯಪುಸ್ತಕ ಪೂರೈಕೆ
ಜಿಲ್ಲೆಯಲ್ಲಿ ಶೇ 99.8 ಪಠ್ಯಪುಸ್ತಕ ಪೂರೈಕೆಯಾಗಿದೆ. ಸಮವಸ್ತ್ರ ವಿತರಣೆ ಬಾಕಿ ಇದೆ. ಶೂ ಮತ್ತು ಸಾಕ್ಸ್ ಎಸ್‌ಡಿಎಂಸಿ ಮೂಲಕ ಖರೀದಿಸುವಂತೆ ಆದೇಶವಿದೆ. ಅನುದಾನ ಬಿಡುಗಡೆಯಾಗಿಲ್ಲ ಎಂದು ಡಿಡಿಪಿಐ ಶೇಷಶಯನ ಕೆ. ಮಾಹಿತಿ ನೀಡಿದರು. ಶೇ.50 ಬಿತ್ತನೆ ಪೂರ್ಣ
ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಮಳೆಯ ಪ್ರಮಾಣದಲ್ಲಿ ಸುಧಾರಣೆಯಾಗಿದೆ. ಶೇ.50ರಷ್ಟು ಬಿತ್ತನೆ ಪೂರ್ಣಗೊಂಡಿದೆ. ಪಿಎಂ ಕಿಸಾನ್ ಯೋಜನೆಯಡಿ 1,26,600 ರೈತರು ನೋದಾಯಿಸಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಮಾಹಿತಿ ನೀಡಿದರು. ಸಾಮಾಜಿಕ ಅರಣ್ಯ ಇಲಾಖೆಯಿಂದ 3.7 ಲಕ್ಷ ಸಿಸಿ ವಿತರಣೆ ಗುರಿ ಇದ್ದು, 1.69 ಲಕ್ಷ ಸಸಿ ವಿತರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದರು.
ಸ್ವತ್ಛ ಮೇವ ಜಯತೇ ಅಂಗವಾಗಿ ಜಿಲ್ಲೆಯ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಭೆಯಲ್ಲಿ ಬಹುಮಾನ ವಿತರಿಸಲಾಯಿತು. ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಬಾಬು ಶೆಟ್ಟಿ, ಉದಯ ಕೋಟ್ಯಾನ್, ಜಿ.ಪಂ. ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು. ತೆರಿಗೆ ಸಂಗ್ರಹ: ಉಡುಪಿ ದ್ವಿತೀಯ
ಗ್ರಾ.ಪಂ.ಗಳ ತೆರಿಗೆ ಸಂಗ್ರಹದಲ್ಲಿ 2018-19ನೇ ಸಾಲಿನಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ 2ನೇ ಸ್ಥಾನ ಪಡೆದಿದೆ. ಎಲ್ಲ ಗ್ರಾ.ಪಂ. ವ್ಯಾಪ್ತಿಯಲ್ಲಿನ ಮೊಬೈಲ್ ಟವರ್‌ಗಳ ತೆರಿಗೆ ಕೂಡ ಸಂಗ್ರಹಿಸಬೇಕು ಎಂದು ಸಿಇಒ ಸೂಚಿಸಿದರು.