ಬಳ್ಳಾಪುರ: ದೀಪಾವಳಿ ಹಬ್ಬದ ಸಾಲಿನ ನರಕ ಚತುರ್ದಶಿ ಆಚರಿಸಲು ತಾಲೂಕಿನಲ್ಲಿ ಸಿದ್ಧತೆ ನಡೆಯು ತ್ತಿದ್ದು, ದೀಪಾವಳಿಯ ಪಟಾಕಿ ಮಾರಾಟ ಕಳೆಗುಂದಿದೆ. ಈ ಬಾರಿ ಸುಪ್ರೀಂ ಕೋರ್ಟ್ ಆದೇಶದಂತೆ ಹಸಿರು ಪಟಾಕಿ ಹಾಗೂ ಮಾಲಿನ್ಯ ರಹಿತ ಪಟಾಕಿಗಳ ಮಾರಾಟಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ.
ಈ ಹಿನ್ನೆಲೆ, ಪಟಾಕಿ ಮಾರಾಟಕ್ಕೆ ಪರವಾನಗಿ ಸಿಗುವುದು ವಿಳಂಬ ವಾಗಿ, ಮಂಗಳವಾರವೂ ಪಟಾಕಿ ಮಾರಾಟ ಗಾರರು ಕಾದು ಕುಳಿತುಕೊಳ್ಳುವಂತಾಗಿತ್ತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಪರವಾನಗಿ ಪಡೆದ 8 ಅಂಗಡಿಗಳ ವ್ಯಾಪಾರಿಗಳು ಪಟಾಕಿಗಳನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿದ್ದಾರೆ.
ಇದನ್ನೂ ಓದಿ:- ಪ್ರಧಾನಿ ಮೋದಿಯವರ ದೇಶ ಪ್ರೇಮ ನಮಗೆ ಆದರ್ಶವಾಗಲಿ: ಸಂಸದ ಗೋಪಾಲ್ ಶೆಟ್ಟಿ
ಮಾರ್ಗ ಸೂಚಿ ಅನ್ವಯ ಮಾರಾಟ: ಸುಪ್ರೀಂ ಕೋರ್ಟ್ ಸೂಚನೆಯಂತೆ ಹಸಿರು ಪಟಾಕಿಗಳ ತಯಾರಿಕೆಯ ಮಾರ್ಗಸೂಚಿ ಅನುಸರಿಸಿ ತಯಾರಿಸ ಲಾಗಿರುವ ಕಂಪನಿಗಳಿಂದಲೇ ನಾವು ಪಟಾಕಿಗಳನ್ನು ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ಆದ್ದರಿಂದ, ಗ್ರಾಹಕರು ಯಾವುದೇ ಆತಂಕವಿಲ್ಲದೇ ಖರೀದಿಸ ಬಹುದು.
ಆದರೆ, ಎಂದಿನಂತೆ ನಮಗೆ ಪಟಾಕಿ ಅಂಗಡಿ ಇಡುವುದಕ್ಕೆ ಜಾಗ ನೀಡುವುದು ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದು ಪರವಾನಗಿ ಪಡೆ ಯುವುದು ತ್ರಾಸ ಆಗಿದೆ. ಕಳೆದ ಬಾರಿಗೆ ಹೋಲಿಸಿ ದರೆ ಈ ಬಾರಿ ಪಟಾಕಿ ವ್ಯಾಪಾರ ಕುಸಿತ ಕಂಡಿದೆ. ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿದರೂ, ಮುಂಚಿತವಾಗಿ ಹೇಳಿದರೆ ನಮಗೆ ಅನುಕೂಲಆಗಲಿದೆ. ಎನ್ನುತ್ತಾರೆ ಪಟಾಕಿ ವ್ಯಾಪಾರಿಗಳು.