Advertisement
ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಕೋಲಾರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆ ಯಲಿದೆ. ರಾಜ್ಯದ ಬಹುತೇಕ ಕಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಕಡಲ ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆಯಾಗಿದ್ದು, ಮಳೆ ಸಂಬಂಧಿ ದುರ್ಘಟನೆಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಹರಪನಹಳ್ಳಿಯಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಸಹರಾಭಾನು (9) ಎಂಬ ಬಾಲಕಿ ಮೃತಪಟ್ಟಿದ್ದಾಳೆ. ಬುಧವಾರ ರಾತ್ರಿ ಮನೆಯ ಮಹಡಿ ಮೇಲೆ ಪೋಷಕರ ಜತೆ ಮಲಗಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಬುಧವಾರ ರಾತ್ರಿ ಸಿಡಿಲು ಬಡಿದು ಎನ್.ಸಿದ್ದಪ್ಪ (30) ಎಂಬುವರು ಮೃತಪಟ್ಟಿದ್ದಾರೆ. ಬೀಳಗಿ ತಾಲೂಕಿನ ಸುನಗ ಗ್ರಾಮದಲ್ಲಿ ಸಿಡಿಲು ಬಡಿದು ಬಸಪ್ಪ ಹುಸನಪ್ಪ ಸೀತನ್ನವರ (40) ಮೃತಪಟ್ಟಿದ್ದಾರೆ. ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿಯಿತು. ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಬಿರುಗಾಳಿ ಮಳೆಗೆ ಮನೆ ಗೋಡೆ ಕುಸಿದು ರೈತ ಯಲ್ಲಪ್ಪ ಸತ್ಯಪ್ಪ ಬಡು ಗುರವ (60) ಮೃತಪಟ್ಟಿದ್ದಾರೆ.