Advertisement

ಕನ್ನಡಿಗರಿಗೆ ಉದ್ಯೋಗ ಮೀಸಲಿಗಾಗಿ ಬೃಹತ್‌ ರ್ಯಾಲಿ

11:38 AM Dec 24, 2017 | |

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಮೀಸಲಾತಿ ನೀಡಬೇಕು ಮತ್ತು ಡಾ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಬೃಹತ್‌ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿತ್ತು.

Advertisement

ರಾಜಾಧ್ಯಕ್ಷ ಟಿ.ಎ. ನಾರಾಯಣಗೌಡ ನೇತೃತ್ವದಲ್ಲಿ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್‌ ರ್ಯಾಲಿ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು, ಕನ್ನಡಿಗರ ಬೇಡಿಕೆಗಳ ಈಡೇರಿಕೆಗೆ ಆದ್ಯತೆಯ ಮೇಲೆ ಬದ್ಧತೆ ಪ್ರದರ್ಶಿಸುವಂತೆ ಸರ್ಕಾರಕ್ಕೆ ಹಕ್ಕೋತ್ತಾಯ ಮಂಡಿಸಿದರು. ಈ ವೇಳೆ ಮಾತನಾಡಿದ ಟಿ.ಎ. ನಾರಾಯಣ ಗೌಡ, ಸರ್ಕಾರಗಳ ನೀತಿಗಳಿಂದಾಗಿ ಕನ್ನಡಿಗರು ಕನ್ನಡದ ನೆಲದಲ್ಲಿ ತಮ್ಮ ಅಸ್ಮಿತೆ ಕಳೆದುಕೊಳ್ಳುವಂತಾಗಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲದಂತಾಗಿದ್ದು, ಪರಭಾಷಿ ಕರನ್ನು ನಮ್ಮನ್ನು ಆಳುವ ಪರಿಸ್ಥಿತಿ ಬಂದಿದೆ.

ಸಂವಿಧಾನಬದ್ಧವಾಗಿ, ನ್ಯಾಯಬದ್ಧವಾಗಿ ಕನ್ನಡಿಗರಿಗೆ ಸಿಗಬೇಕಾದ ಉದ್ಯೋಗಗಳು, ಪರಭಾಷಿಕರ ಪಾಲಾಗುತ್ತಿವೆ. ಕೇಂದ್ರ ಸರ್ಕಾರದ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಆದರೆ, ಬೇರೆ ರಾಜ್ಯದ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕನ್ನಡಿಗರ ವಿಚಾರದಲ್ಲಿ ಸರ್ಕಾರಗಳು ತಮ್ಮ ಹೊಣೆಗಾರಿಕೆ ಮರೆತಿರಬಹುದು. ಆದರೆ, ಕರ್ನಾಟಕ ರಕ್ಷಣಾ ವೇದಿಕೆ ಈ ವಿಚಾರದಲ್ಲಿ ಸದಾ ಜಾಗೃತವಾಗಿದೆ ಎಂದರು.

ನಾಲ್ಕು ತಿಂಗಳ ಗಡುವು: ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಮತ್ತು ನ್ಯಾಯ ಸಿಗಬೇಕಾದರೆ, ದಶಕಗಳಿಂದ ಸ್ಥಳೀಯರ ಬದುಕಿನ ಪ್ರಶ್ನೆಯಾಗಿರುವ ಸರೋಜಿನ ಮಹಿಷಿ ವರದಿ ಜಾರಿ ಯಾಗಲೇಬೇಕು. ಆದರೆ, ಎಲ್ಲ ಸರ್ಕಾರಗಳು ಮಹಿಷಿ ವರದಿಯನ್ನು ನಿರ್ಲಕ್ಷ್ಯ ಮಾಡಿವೆ.

ರಾಜ್ಯ ಸರ್ಕಾರವು ಕೂಡಲೇ ಸರೋಜಿನಿ ಮಹಿಷಿ ವರದಿಯನ್ನು ಸಂವಿಧಾನಾತ್ಮಕವಾಗಿ ಅನುಷ್ಠಾನಕ್ಕೆ ತರಬೇಕು. ಈ ಮೂಲಕ ರಾಜ್ಯದಲ್ಲಿ ಸೃಷ್ಟಿಯಾಗುವ ಕೇಂದ್ರ- ರಾಜ್ಯ ಸರ್ಕಾರ ಹಾಗೂ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕು. ನಾಲ್ಕು ತಿಂಗಳೊಳಗಾಗಿ ಸರ್ಕಾರ ಸ್ಪಂದಿಸದಿದ್ದರೆ ರಾಜ್ಯದ 30 ಜಿಲ್ಲೆಗಳಲ್ಲೂ ಉಗ್ರ ಹೋರಾಟ ರೂಪಿಸಲಾಗುವುದು ಎಂದು
ನಾರಾಯಣಗೌಡ ಎಚ್ಚರಿಕೆ ನೀಡಿದರು. 

Advertisement

ಪ್ರಮುಖ ಬೇಡಿಕೆಗಳು „ ರಾಜ್ಯದ ಎಲ್ಲ ಇಲಾಖೆ, ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಉದ್ಯೋಗಗಳಿಗೆ ಕರ್ನಾಟಕದ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಬೇಕು. „ ರಾಜ್ಯದದ ಎಲ್ಲ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳಲ್ಲಿ ಕನ್ನಡಿಗರನ್ನೇ ನೇಮಕ ಮಾಡಬೇಕು. „ ರಾಜ್ಯ, ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳಿಗೆ ಕನ್ನಡದಲ್ಲಿ ಉತ್ತರಿಸಲು ಅವಕಾಶ ನೀಡಬೇಕು. ಸಂದರ್ಶನ ಕನ್ನಡದಲ್ಲಿ ನಡೆಯಬೇಕು. ರಾಷ್ಟ್ರ ಧ್ವಜ ಮಾದರಿಯಲ್ಲಿ ಕರುನಾಡಿಗೊಂದು ಪ್ರತ್ಯೇಕ ನಾಡಧ್ವಜ ಬೇಕು ಎಂಬ ಕಾರಣಕ್ಕೆ ಸರ್ಕಾರ ಸಮಿತಿ ರಚಿಸಿದೆ. ಒಬ್ಬ ವಿದ್ಯಾರ್ಥಿ ಇದ್ದರೂ ಆ ಶಾಲೆ ಮುಚ್ಚದೆ ಶಿಕ್ಷಕರ ನೇಮಕ ಮಾಡಲಾಗುವುದು. ಇದು ಸರ್ಕಾರದ ಬದ್ಧತೆ.
 ●ಎಂ. ಕೃಷ್ಣಪ್ಪ, ವಸತಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next