Advertisement

ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ

07:14 AM Jun 27, 2019 | Lakshmi GovindaRaj |

ದೇವನಹಳ್ಳಿ: ತಾಲೂಕಿನ ಪ್ರತಿಯೊಂದು ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು.

Advertisement

ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ನಲ್ಲೂರು ಗ್ರಾಮದ ಮಾರುತಿ ಪ್ರೌಢಶಾಲೆ ಆವರಣದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಶಾಸಕರ ಅನುದಾನದಲ್ಲಿ ಎರಡು ಕೊಠಡಿಗಳಿಗೆ 10ಲಕ್ಷ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರ ಶೈಕ್ಷಣಿಕ ಪ್ರಗತಿಗೆ ಬಜೆಟ್‌ನಲ್ಲಿ ಸಾವಿರಾರು ಕೋಟಿ ಮೀಸಲಿರಿಸಿದೆ.

ಪ್ರತಿ ಶಾಲೆಯಲ್ಲೂ ಶೌಚಾಲಯ ಸೇರಿದಂತೆ ಎಲ್ಲಾ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಈಗಾಗಲೇ ತಾಲೂಕಿನ ಕೆಲವು ಶಾಲೆಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಸಂಸ್ಥೆಯ ಸಿಎಸ್‌ಆರ್‌ ಅನುದಾನದಲ್ಲಿ ಶಾಲಾ ಕಟ್ಟಡಗಳು ನವೀಕರಣಗೊಳ್ಳುತ್ತಿವೆ.

ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲಿಸುವ ಬದಲಿಗೆ ಸರ್ಕಾರಿ ಶಾಲೆಯಲ್ಲಿಯೇ ಓದುವಂತೆ ಉತ್ತೇಜನ ನೀಡಬೇಕು. ಆಂಗ್ಲ ವ್ಯಾಮೋಹದಿಂದ ಹೊರಬರಲು ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಪ್ರಾರಂಭಿಸಿರುವುದು ವಿಶೇಷವಾಗಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಉದ್ದೇಶವಾಗಿದೆ ಎಂದು ಹೇಳಿದರು.

Advertisement

ಜಿಪಂ ಸದಸ್ಯ ಲಕ್ಷ್ಮೀನಾರಾಯಣ್‌ ಮಾತನಾಡಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಎರಡು ಕೊಠಡಿಗಳಿಗೆ ಚಾಲನೆ ಕೊಡಲಾಗುತ್ತದೆ. ಗುತ್ತಿಗೆದಾರರು ಕಟ್ಟಡ ಕಾಮಗಾರಿ ಮಾಡುವಾಗ ಗುಣಮಟ್ಟ ಕಾಯ್ದಿರಿಸುವಂತೆ ನೋಡಿಕೊಳ್ಳಬೇಕು.

ಈ ಹಿಂದೆ ನಾವು ಮೂರು ಕೊಠಡಿಗಳನ್ನು ನಿರ್ಮಿಸಿಕೊಡಲಾಗಿತ್ತು. ಸುಮಾರು ವರ್ಷಗಳಿಂದ ಪ್ರೌಢಶಾಲೆ ನಡೆಸುವುದಕ್ಕೆ ಹೆಚ್ಚು ಆದ್ಯತೆ ನೀಡಲಾಗಿತ್ತು. ಉತ್ತಮವಾಗಿ ಶಾಲೆ ನಡೆಯುತ್ತಿದ್ದು, ನಲ್ಲೂರು ಮತ್ತು ಜೊನ್ನಹಳ್ಳಿ ಗ್ರಾಮಗಳ ಸುತ್ತಮುತ್ತಲಿನ ಮಕ್ಕಳಿಗೆ ಅನುಕೂಲವಾಗಿದೆ.

ಇತ್ತಿಚೆಗೆ ಮಳೆ ಗಾಳಿಯಿಂದ ಶಾಲೆ ಕಟ್ಟಡದ ಮೇಲ್ಚಾವಣಿ ಗಾಳಿಗೆ ಹಾರಿಹೋಗಿದೆ. ಶಾಸಕರ ಅನುದಾನದಲ್ಲಿ ಎರಡು ಕೊಠಡಿಗಳನ್ನು ಅತೀ ಶೀಘ್ರದಲ್ಲಿಯೇ ನಿರ್ಮಿಸಿಕೊಟ್ಟರೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮುನಿರಾಜು, ಮಾಜಿ ಅಧ್ಯಕ್ಷ ಆರ್‌.ಮುನೇಗೌಡ, ಎಪಿಎಂಸಿ ನಾಮಿನಿ ನಿರ್ದೇಶಕ ಜಯರಾಮೇಗೌಡ, ತಾಲೂಕು ಸೊಸೆ„ಟಿ ಮಾಜಿ ಅಧ್ಯಕ್ಷ ಚಿಕ್ಕನಾರಾಯಣಸ್ವಾಮಿ, ಚನ್ನರಾಯಪಟ್ಟಣ ಹೋಬಳಿ ಜೆಡಿಎಸ್‌ ಅಧ್ಯಕ್ಷ ಮುನಿರಾಜು, ಮುಖ್ಯಶಿಕ್ಷಕ ಕೃಷ್ಣಮೂರ್ತಿ, ಮುಖಂಡ ಮುನಿರಾಜು, ಮಂಜುನಾಥ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next