Advertisement

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು: ನಿರಾಣಿ

05:03 PM Sep 03, 2021 | Team Udayavani |

ತುಮಕೂರು: ರಾಜ್ಯದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಬರಬೇಕು. ಹೆಚ್ಚು ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯ ಬೇಕು ಎಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ತಿಳಿಸಿದರು.

Advertisement

ನಗರದ ಹೊರವಲಯದಲ್ಲಿರುವ ವಸಂತ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ ಉತ್ತೇಜನ ನೀಡುವ ಮೂಲಕ ಉದ್ಯೋಗ ಸೃಷ್ಟಿಸಿ ನಿರುದ್ಯೋಗ ಸಮಸ್ಯೆ ನಿವಾರಣೆಗೆಹೆಚ್ಚುಒತ್ತು ನೀಡಲಾಗುತ್ತಿದೆ.

ಈಗಾಗಲೇ 2010-11ರಲ್ಲಿ ರಾಜ್ಯದಲ್ಲಿ ಇನ್ವೆಸ್ಟ್‌ ಕರ್ನಾಟಕ ನಡೆಸಲಾಗಿದೆ. ಅದೇ ಮಾದರಿಯಲ್ಲಿ 2022ರಲ್ಲಿ ಇನ್ವೆಸ್ಟ್‌ ಕರ್ನಾಟಕ ನಡೆಸುವ ಸಂಬಂಧ ಸಧ್ಯದಲ್ಲೇ ದಿನಾಂಕ ನಿಗದಿಗೊಳಿಸಲಾಗುವುದು. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇವೆ. ಇನ್ವೆಸ್ಟ್‌ ಕರ್ನಾಟಕದ ಮೂಲಕ ರಾಜ್ಯದಲ್ಲಿ ಕನಿಷ್ಠ 5 ಲಕ್ಷ ಉದ್ಯೋಗ ಸೃಷ್ಟಿಯಾಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಶಿವಮೊಗ್ಗ: ಮತಗಟ್ಟೆ ಎದುರು ರಾಜಕೀಯ ಪಕ್ಷಗಳ ಘೋಷಣೆ

ಕಾಮಗಾರಿ ವೀಕ್ಷಣೆ: ವಿಶ್ವದಲ್ಲೇ ಪ್ರಸದ್ಧಿ ಪಡೆಯುತ್ತಿರುವ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ತಲೆಯೆತ್ತಿರುವ ಫ‌ುಡ್‌ ಪಾರ್ಕ್‌ ಸೇರಿದಂತೆ ವಿವಿಧ ಕೈಗಾರಿಕೆಗಳಿಗೂ ಭೇಟಿ ನೀಡಿದ ಸಚಿವ ನಿರಾಣಿ ಅವರು, ಕೈಗಾರಿಕೆಗಳಲ್ಲಿ ಕೈಗೊಳ್ಳಲಾಗಿರುವ
ಕಾರ್ಯ ವಿಧಾನಗಳನ್ನು ವೀಕ್ಷಿಸಿದರು. ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಟ್ರೀಟೆಡ್‌ ವಾಟರ್‌ ಪ್ಲಾಂಟ್‌, ಮೆಷಿನ್‌ ಟೂಲ್‌ ಪಾರ್ಕ್‌ ಸೇರಿದಂತೆ ವಿವಿಧ ಕೈಗಾರಿಕೆಗಳ ಕಾಮಗಾರಿ ಗಳು ಪ್ರಗತಿಯಲ್ಲಿದ್ದು, ಸಂಬಂಧಪಟ್ಟ ಅಧಿಕಾರಿ ಗಳೊಂದಿಗೆ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಕಲೆ ಹಾಕಿದರು.

Advertisement

ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೂ ತೆರಳಿ ಖುದ್ದು ವೀಕ್ಷಿಸಿ, ಅಗತ್ಯ ಮೂಲಭೂತ ಸೌಕರ್ಯ ಗಳೊಂದಿಗೆ ಕೈಗಾರಿಕೆಗಳ ಆರಂಭ
ಅಗಬೇಕು. ಆ ನಿಟ್ಟಿನಲ್ಲಿ ಕಾಮಗಾರಿಗಳನ್ನುನಡೆಸುವಂತೆ ಸೂಚನೆ ನೀಡಿದರು.

ಸೌಕರ್ಯದ ಕೊರತೆ ಉಂಟಾಗಬಾರದು: ನಂತರ ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಕೆಐಎಡಿಬಿ ಹಾಗೂ ಕೈಗಾರಿಕಾ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಚಿವ ನಿರಾಣಿ, ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಅಗತ್ಯ ಇರುವ ಎಲ್ಲ ರೀತಿಯ ಸವಲತ್ತುಗಳನ್ನು
ಸರ್ಕಾರ ಒದಗಿಸುತ್ತಿದೆ. ಇದು ಸಮರ್ಪಕವಾಗಿಬಳಕೆಯಾಗಬೇಕು. ಇಡೀ ವಿಶ್ವದಲ್ಲೇ ಈ ಕೈಗಾರಿಕಾ ಪ್ರದೇಶ ಮಾದರಿಯಾಗಿರಬೇಕು. ಈ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಯಾವುದೇ ರೀತಿಯ ಮೂಲಭೂತ ಸೌಕರ್ಯದ ಕೊರತೆ ಉಂಟಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳುಕ್ರಮ ವಹಿಸುವಂತೆ ತಿಳಿಸಿದರು.

ಕೆಐಎಡಿಬಿ ಸಿಇಒ ಡಾ. ಶಿವಶಂಕರ್‌, ಮುಖ್ಯ ಎಂಜಿನಿಯರ್‌ ಬಿ.ಕೆ. ಪವಿತ್ರಾ, ಕಾರ್ಯನಿರ್ವಾಹಕ ಎಂಜಿನಿಯರ್‌ ಸುನಿಲ್‌, ವಿಶೇಷ ಜಿಲ್ಲಾಧಿಕಾರಿ
ಭಂಡಾರಿ, ವಿಶೇಷ ಭೂಸ್ವಾಧೀನಾಧಿಕಾರಿ ತಬಸ್ಸಮ್‌ ಜಹೇರಾ, ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ಬಿ.ನಾಗೇಶ್‌, ಫ‌ುಡ್‌ಪಾರ್ಕ್‌ ಅಧಿಕಾರಿ ಕರಣ್‌ ಕೇಟ್‌ ಮತ್ತಿತರರು ಇದ್ದರು.

ರಾಜ್ಯದಲ್ಲೇ ಮೊದಲ ಫ‌ುಡ್‌ ಪಾರ್ಕ್‌
ತುಮಕೂರಿನ ವಸಂತನರಸಾಪುರಕೈಗಾರಿಕಾ ಪ್ರದೇಶದ105 ಎಕರೆಯಲ್ಲಿರುವ ಫ‌ುಡ್‌ಪಾರ್ಕ್‌ ಅತ್ಯುತ್ತಮ ಮಾದರಿಯಲ್ಲಿದೆ. ಇಲ್ಲಿ ಸಾವಿರಾರು
ಕೋಟಿ ರೂ. ಹೂಡಿಕೆಯಾಗುತ್ತಿದೆ. ಇದು ರಾಜ್ಯದಲ್ಲೇ ಮೊದಲನೇ ಫ‌ುಡ್‌ ಪಾರ್ಕ್‌ ಆಗಿದೆ. ಈ ಫ‌ುಡ್‌ ಪಾರ್ಕ್‌ನಲ್ಲಿ ವಿವಿಧ ರೀತಿಯಲ್ಲಿ ಆಹಾರ ಪದಾರ್ಥಗಳ ಸಂರಕ್ಷಣೆ ಮಾಡಲಾಗುತ್ತಿದೆ. ಫ‌ುಡ್‌ ಪಾರ್ಕ್‌ನಲ್ಲಿ ಶೇ.80ಕ್ಕಿಂತ ಹೆಚ್ಚು ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂಬ ಉದ್ದೇಶ ಇದೆ. ಆದರೆ, ಅದಕ್ಕೆ ತಕ್ಕಂತೆಕೌಶಲ್ಯದ ಕೊರತೆ ಇದೆ. ಅದನ್ನು ಸರಿಪಡಿಸುವ ಪ್ರಯತ್ನ ಮಾಡಲಾಗಿದೆ ಎಂದುಕೈಗಾರಿಕಾ ಸಚಿವ
ಮುರಗೇಶ್‌ ನಿರಾಣಿ ತಿಳಿಸಿದರು.

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶ ಇಡೀ ವಿಶ್ವದಲ್ಲೇ ಮಾದರಿ ಕೈಗಾರಿಕಾ ಪ್ರದೇಶವಾಗಿರಬೇಕು. ಈ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಯಾವುದೇ ರೀತಿಯ ಮೂಲಸೌಕರ್ಯದ ಕೊರತೆ ಉಂಟಾಗ ಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳುಕ್ರಮಕೈಗೊಳ್ಳಬೇಕು.
● ಮುರಗೇಶ್‌ ನಿರಾಣಿ, ಕೈಗಾರಿಕಾ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next