Advertisement

ಮಧ್ಯಪ್ರದೇಶ ಆಯ್ತು ಈಗ ಪಂಜಾಬ್ ನ ಜಲಂಧರ್ ನಲ್ಲಿ ಗ್ರೀನ್ ಫಂಗಸ್ ಪ್ರಕರಣ ಪತ್ತೆ

05:23 PM Jun 20, 2021 | Team Udayavani |

ನವದೆಹಲಿ: ಮಧ್ಯಪ್ರದೇಶದಲ್ಲಿ ಹಸಿರು ಫಂಗಸ್ ಸೋಂಕು ಮೊದಲ ಪ್ರಕರಣ ವರದಿಯಾದ ಬೆನ್ನಲ್ಲೇ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡ ಪಂಜಾಬ್ ನ ಜಲಂಧರ್ ನ ವ್ಯಕ್ತಿಯೊಬ್ಬರಲ್ಲಿ ಹಸಿರು ಫಂಗಸ್ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಒಡಿಶಾ: ಕೋವಿಡ್ 19 ಸೋಂಕಿನಿಂದ ಜನಪ್ರಿಯ ಒಡಿಯಾ ಗಾಯಕಿ ತಾಪು ಮಿಶ್ರಾ ನಿಧನ

60 ವರ್ಷದ ರೋಗಿಯೊಬ್ಬರು ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು. ಅವರಲ್ಲಿ ಹಸಿರು ಫಂಗಸ್ ಪತ್ತೆಯಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಜಿಲ್ಲಾ ಸಿವಿಲ್ ಆಸ್ಪತ್ರೆಯ ಡಾ.ಪರಮ್ ವೀರ್ ಸಿಂಗ್ ಎಎನ್ ಐಗೆ ತಿಳಿಸಿದ್ದಾರೆ.

ಪಂಜಾಬ್ ರಾಜ್ಯದಲ್ಲಿ ಪತ್ತೆಯಾದ ಮೊದಲ ಗ್ರೀನ್ ಫಂಗಸ್ ಪ್ರಕರಣ ಇದಾಗಿದೆ ಎಂದು ಡಾ.ಸಿಂಗ್ ಮಾಹಿತಿ ನೀಡಿದ್ದಾರೆ. ಹಸಿರು ಶಿಲೀಂಧ್ರ ಸೋಂಕಿಗೆ ಒಳಗಾಗಿರುವ ವ್ಯಕ್ತಿ ಕಪ್ಪು ಶಿಲೀಂಧ್ರದಂತೆಯೇ ರೋಗಲಕ್ಷಣಗಳನ್ನು ಹೊಂದಿರುತ್ತಾನೆ. ಇದಕ್ಕೆ ನಾವು ಅನಗತ್ಯವಾಗಿ ಭಯಪಡುವ ಅಗತ್ಯವಿಲ್ಲ, ಆದರೆ ನಾವು ಇದರ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಇದಕ್ಕೂ ಮುನ್ನ ಜೂನ್ 14ರಂದು 34 ವರ್ಷದ ರೋಗಿಯೊಬ್ಬನಲ್ಲಿ ಹಸಿರು ಫಂಗಸ್ ಪತ್ತೆಯಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಇಂದೋರ್ ಖಾಸಗಿ ಆಸ್ಪತ್ರೆಯಿಂದ ಏರ್ ಲಿಫ್ಟ್ ಮೂಲಕ ಮುಂಬಯಿಯ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next