Advertisement
ಪಟ್ಟಣದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
Related Articles
Advertisement
ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಕಾಂಗ್ರೆಸ್ ನಾಯಕರಿಗೆ ಬುದ್ಧಿ ಭ್ರಮಣೆಯಿಂದ ಮನಬಂದಂತೆ ಮಾತನಾಡುತ್ತಿದ್ದಾರೆ. ಕಿಚಡಿ ಸರ್ಕಾರದಲ್ಲಿ ಅಪವಿತ್ರ ಮೈತ್ರಿ ಮಾಡಿಕೊಂಡ ಕಿಚಡಿ ಸರ್ಕಾರ ನಡೆಸುತ್ತಿರುವ ಅದು ಜೆಡಿಎಸ್ ಕೈಯಲ್ಲಿ ಸಿಕ್ಕು ನರಳಾಡುತ್ತಿದೆ. ಜನರಲ್ಲಿ ಸರ್ಕಾರದ ಮೇಲೆ ನಂಬಿಕೆಯಿಲ್ಲದಂತಾಗಿದೆ. ನೀರಾವರಿ ಯೋಜನೆಗಳು ನಿಂತಲ್ಲೇ ನಿಂತಿವೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೂ ಬಿಡಿಗಾಸಿನ ಅನುದಾನ ಬರುತ್ತಿಲ್ಲ. ಶಿವಕುಮಾರ ಉದಾಸಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಅನುದಾ ತಂದಾದರೂ ಬ್ಯಾಡಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಲೋಕಸಭೆ ಚುನಾವಣೆಯಲ್ಲಿ 25 ಸಾವಿರಕ್ಕೂ ಹೆಚ್ಚು ಲೀಡ್ ನೀಡುವ ಮೂಲಕ ಭಾರತೀಯ ಜನತಾ ಪಕ್ಷದ ಗೌರವ ಹೆಚ್ಚಿಸಿದ್ದೀರಿ ಎಂದು ಹೇಳಿದರು.
ಮಾಜಿ ಶಾಸಕ ಸುರೇಶಗೌಡ ಪಾಟೀಲ ಮಾತನಾಡಿ, ಸ್ವಾತಂತ್ರ್ಯ ನಂತರ 6 ದಶಕಗಳ ಕಾಲ ನಮ್ಮನ್ನಾಳಿದ ಕಾಂಗ್ರೆಸ್ ದೇಶವನ್ನು ಆರ್ಥಿಕವಾಗಿ ದಿವಾಳಿಯನ್ನಾಗಿಸಿದ್ದಲ್ಲದೇ ವಿಶ್ವ ಮಟ್ಟದಲ್ಲಿ ನಮ್ಮದೊಂದು ಸಾಲಗಾರ ದೇಶ ಎಂಬುದನ್ನು ಸಾಬೀತು ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ನಿಸ್ವಾರ್ಥ ಸೇವೆ ಮತ್ತು ಪ್ರಾಮಾಣಿಕ ಆಡಳಿತ ನೀಡುವ ಮೂಲಕ ದೇಶದ ಸಾಮರ್ಥ್ಯ ವಿಶ್ವಕ್ಕೆ ಪರಿಚಯಿಸಿದ್ದಾರೆ, ಒಂದು ವೇಳೆ ಸ್ವಾತಂತ್ರ್ಯಕ್ಕೂ ಮುನ್ನ ಇಂತಹ ಒಬ್ಬ ಧೀಮಂತ ನಾಯಕ ನಮಗೆ ಸಿಕ್ಕಿದ್ದರೇ ಇಡೀ ವಿಶ್ವ ಸಂಸ್ಥೆ ನಮ್ಮ ಕಾಲಡಿಯಲ್ಲಿರುತ್ತಿತ್ತು ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನ ಮಾತನಾಡಿ, ಈ ಸಲದ ಲೋಕಸಭೆ ಚುನಾವಣೆ ಫಲಿತಾಂಶ ಇಡೀ ವಿಶ್ವವನ್ನೇ ಬೆರಗುಗೊಳಿಸಿದೆ. ಫಲಿತಾಂಶ ಹೊರಬರುತ್ತಿದ್ದಂತೆ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಇಂತಹ ನೆಲ ಕಚ್ಚಿದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಲು ಎಲ್ಲರೂ ಹೆದರಿ ಓಡಿ ಹೋಗುತ್ತಿದ್ದು, ಆ ಸ್ಥಾನವನ್ನು ವಹಿಸಿಕೊಳ್ಳಲು ಯಾರೂ ಸಿದ್ದರಿಲ್ಲ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನೂತನ ಸಂಸದ ಶಿವಕುಮಾರ ಉದಾಸಿ ಅವರನ್ನು ಬಿಜೆಪಿ ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು.
ತಾಲೂಕು ಅಧ್ಯಕ್ಷ ಶಂಕ್ರಣ್ಣ ಮಾತನವರ, ಕಾರ್ಯದರ್ಶಿ ವೀರೇಂದ್ರ ಶೆಟ್ಟರ, ಮುಖಂಡರಾದ ಜಯಣ್ಣ ಮಲ್ಲಿಗಾರ, ಚನ್ನವೀರಗೌಡ, ವಿ.ವಿ. ಹಿರೇಮಠ, ಸುರೇಶ ಯತ್ನಳ್ಳಿ, ರವೀಂದ್ರ ಪಟ್ಟಣಶೆಟ್ಟಿ, ಮುರಿಗೆಪ್ಪ ಶೆಟ್ಟರ, ಶಿವಯೋಗಿ ಶಿರೂರ, ವನಿತ ಗುತ್ತಲ, ವಿಜಯ ಮಾಳಗಿ, ಪುರಸಭೆ ಸದಸ್ಯರಾದ ಬಿ.ಎಂ. ಛತ್ರದ, ರಾಮಣ್ಣ ಕೋಡಿಹಳ್ಳಿ, ಚಂದ್ರಣ್ಣ ಶೆಟ್ಟರ, ಬಾಲಚಂದ್ರ ಪಾಟೀಲ, ಶಿವಯೋಗಿ ಅಂಗಡಿ, ಕಲಾವತಿ ಬಡಿಗೇರ, ಸುಭಾಸ ಮಾಳಗಿ, ಮಂಜಣ್ಣ ಬಾರ್ಕಿ, ಈರಣ್ಣ ಬಣಕಾರ, ಹನುಮಂತ ಮ್ಯಾಗೇರಿ, ವಿನಯ ಹಿರೇಮಠ, ಮೆಹಬೂಬ್ ಅಗಸನಹಳ್ಳಿ, ಫಕ್ಕೀರಮ್ಮ ಛಲವಾದಿ, ಗಾಯತ್ರಿ ರಾಯ್ಕರ್, ಸರೋಜಾ ಉಳ್ಳಾಗಡ್ಡಿ, ಕವಿತಾ ಸೊಪ್ಪಿನಮಠ ಇದ್ದರು. ಮುರಿಗೆಪ್ಪ ಶೆಟ್ಟರ ಸ್ವಾಗತಿಸಿದರು. ಸುರೇಶ ಅಸಾದಿ ನಿರೂಪಿಸಿದರು. ಮಲ್ಲೇಶ ಬಣಕಾರ ವಂದಿಸಿದರು.