Advertisement
ಈ ವೇಳೆ ಮಾತಾನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಈ ಯೋಜನೆಗೆ ಅನುವು ಮಾಡಿಕೊಟ್ಟ ನಮ್ಮ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಮಾರ್ಗದಲ್ಲಿ ಸುಬ್ರಮಣ್ಯ ದೇವಸ್ಥಾನವಿದೆ. ಧಾರ್ಮಿಕ ಹಾಗೂ ಪ್ರಾಕೃತಿಕ ಅನುಭವಗಳು ಪ್ರವಾಸಿಗರಿಗೆ ಖುಷಿ ಕೊಡುತ್ತದೆ. ಮಂಗಳೂರಿಗೆ 2 ಕೋಚ್ ಗಳನ್ನು ಕೊಟ್ಟಿದ್ದಾರೆ. ಇದರಲ್ಲಿ 40 ಆಸನಗಳಿವೆ. ದಿವ್ಯಾಂಗರಿಗೆ ಪ್ರತ್ಯೇಕವಾಗಿರುವ ವ್ಯವಸ್ಥೆ ಇದರಲ್ಲಿದೆ. ಮೆಟ್ರೋ ರೈಲಿನ ಹಾಗೆ ಇಲ್ಲಿ ಮಾಹಿತಿಯನ್ನು ನೀಡುವ ವ್ಯವಸ್ಥೆಯಿದೆ. ಪಯಣದಲ್ಲಿ ಪ್ರಕೃತಿಯ ದೃಶ್ಯವನ್ನು ನೋಡುತ್ತಾ ಫೋಟೋಗಳನ್ನು ತೆಗೆದುಕೊಂಡು ಆನಂದಿಸಬಹುದು. ಇಂಥ ಯೋಜನೆಯನ್ನು ಸಾಕಾರಗೊಳಿಸಿದ ರೈಲ್ವೆ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
Related Articles
Advertisement
ನಮ್ಮ ಸರ್ಕಾರ ಬಂದ ಮೇಲೆ ರೈಲ್ವೆಯ ಅಭಿವೃದ್ಧಿ ವೇಗವಾಗಿ ಸಾಗುತ್ತಿದೆ. ಮಂಗಳೂರು ರೈಲ್ವೆಯಲ್ಲಿ ಬದಲಾವಣೆಯನ್ನು ತರುವ ಪ್ರಯತ್ನಗಳು ಪ್ರತಿಫಲ ನೀಡುತ್ತಿದೆ. ಮಂಗಳೂರು ರೈಲ್ವೆಗೆ ಕೇಂದ್ರದಿಂದ ಹೆಚ್ಚಿನ ಅನುದಾನವನ್ನು ಕೊಟ್ಟಿದ್ದಾರೆ. ವೇಗವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಇದಕ್ಕಾಗಿ ಕೇಂದ್ರಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿಆರ್ ಎಂ ಕೊಠಾರಿ, ಕಾರ್ಪೋರೆಟ್ ಗಳಾದ ಸುಧೀರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.