Advertisement

ದಾವಣಗೆರೆ ಜಿಲ್ಲೆ ಮತ್ತೆ ಗ್ರೀನ್‌ ಝೋನ್‌ ಆಗಲಿ

09:18 AM May 27, 2020 | sudhir |

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣ ಕಡಿಮೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಅಧಿಕಾರಿಗಳ ಜವಾಬ್ದಾರಿ
ಹೆಚ್ಚಿದೆ. ಹಾಗಾಗಿ ಅವರು ಜಾಗೃತರಾಗಿ ಕೆಲಸ ಮಾಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್‌ ಕಿವಿಮಾತು
ಹೇಳಿದ್ದಾರೆ.

Advertisement

ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್‌-19 ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿರುವ ಸಮಯದಲ್ಲಿ ಜವಾಬ್ದಾರಿ ಹೆಚ್ಚಿದೆ.ಪ್ರಕರಣ ಕಡಿಮೆಯಾಗಿ, ನೆಮ್ಮದಿ ವಾತಾವರಣ ಮೂಡಲು ಕಾರಣರಾದ ಎಲ್ಲಾ ಇಲಾಖೆಗಳ
ಅಧಿಕಾರಿಗಳು, ಸಿಬ್ಬಂದಿಯನ್ನ ಸರ್ಕಾರದ ಪರವಾಗಿ ಅಭಿನಂದಿಸುವೆ ಎಂದರು.

ಜಿಲ್ಲಾಡಳಿತ, ಸಚಿವರು ಹಾಗೂ ಜನಪ್ರತಿನಿಧಿಗಳು ಕೆಲಸ ಮಾಡುತ್ತಿಲ್ಲ ಎನ್ನುವ ಭಾವನೆ ವ್ಯಕ್ತವಾಗಬಾರದು. ಗ್ರೀನ್‌ ಝೋನ್‌ಲ್ಲಿದ್ದ ಜಿಲ್ಲೆಯಲ್ಲಿ ಒಂದೇ ಬಾರಿಗೆ ಕೋವಿಡ್ ಪ್ರಕರಣಗಳು ಏರಿಕೆ ಕಂಡು ಬಂದವು. ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲರೂ ತುಂಬಾ ಸಕ್ರಿಯವಾಗಿ ಕೆಲಸದಲ್ಲಿ ತೊಡಗಿಕೊಂಡು ಮತ್ತೆ ಗ್ರೀನ್‌ ಜೋನ್‌ ಜಿಲ್ಲೆಯಾಗಿಸಲು ಶ್ರಮಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಧಿಕಾರಿ ಮಹಾಂತೇಶ ಬೀಳಗಿ, ಲಾಡ್ಜ್ಗಳಲ್ಲಿ ಹಾಗೂ ಇನ್‌ಸ್ಟಿಟ್ಯೂಷನಲ್‌ ಕ್ವಾರಂಟೈನ್‌ ಮಾಡಲಾಗಿರುವವರಿಗೆ ವಹಿಸಿರುವ ಕಾಳಜಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಹನುಮಂತರಾಯ ಮಾತನಾಡಿ, ಕಂಟೇನ್ಮೆಂಟ್‌ ಝೋನ್‌ನಲ್ಲಿ ಕೈಗೊಂಡಿರುವ ಕ್ರಮ, ಒದಗಿಸಿರುವ ಸೌಲಭ್ಯದ ಬಗ್ಗೆ ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಿ.ಡಿ. ರಾಘವನ್‌ ಮಾತನಾಡಿ, ಕೆಲವು ದಿನಗಳ ಹಿಂದೆ ಅತೀ ಹೆಚ್ಚು ಕೊರೊನಾ ಪಾಸಿಟಿವ್‌
ಕೇಸ್‌ಗಳ ಪೈಕಿ ನಮ್ಮ ಜಿಲ್ಲೆ 4ನೇ ಸ್ಥಾನದಲ್ಲಿತ್ತು. ಇದೀಗ 7ನೇ ಸ್ಥಾನದಲ್ಲಿದೆ. ಅದೇ ರೀತಿ ಸಕ್ರಿಯ ಕೇಸ್‌ಗಳ ಪೈಕಿ 3ನೇ ಸ್ಥಾನದಲ್ಲಿದ್ದ ಜಿಲ್ಲೆ ಇಂದು 10ನೇ ಸ್ಥಾನದಲ್ಲಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದ್ದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಕರಣ ಕಡಿಮೆಯಾಗುತ್ತಿವೆ ಎಂದು ಮಾಹಿತಿ ನೀಡಿದರು.

Advertisement

ಜಿಲ್ಲೆಯಲ್ಲಿ 136 ಕೋವಿಡ್‌ ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗಿವೆ. ಅದರಲ್ಲಿ 65 ಡಿಸ್‌ ಚಾರ್ಜ್‌ ಆಗಿವೆ. ನಾಲ್ವರು ಮೃತಪಟ್ಟಿದ್ದಾರೆ. 14 ಕಂಟೇನ್ಮೆಂಟ್‌ ಝೋನ್‌ಗಳ ಪೈಕಿ ಜಾಲಿನಗರ ಹಾಗೂ ಇಮಾಮ್‌ ನಗರದಲ್ಲಿ ಪ್ರಕರಣ ಹೆಚ್ಚು ಕಂಡುಬಂದಿದೆ ಎಂದು ತಿಳಿಸಿದರು.  ಸಂಸದ ಜಿ.ಎಂ. ಸಿದ್ದೇಶ್ವರ್‌, ಶಾಸಕರಾದ ಎಸ್‌.ಎ. ರವೀಂದ್ರನಾಥ್‌, ಪ್ರೊ| ಎನ್‌. ಲಿಂಗಣ್ಣ, ಎಸ್‌.ವಿ. ರಾಮಚಂದ್ರ, ಎಂಎಲ್‌ಸಿ ಅಬ್ದುಲ್‌ ಜಬ್ಟಾರ್‌, ಜಿಪಂ ಅಧ್ಯಕ್ಷೆ ಯಶೋದಮ್ಮ, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಎಡಿಸಿ ಪೂಜಾರ ವೀರಮಲ್ಲಪ್ಪ, ಜಿಲ್ಲಾ ಕೋವಿಡ್‌ ನೋಡಲ್‌ ಅಧಿಕಾರಿ ಪ್ರಮೋದ್‌ ನಾಯಕ್‌, ಎಸಿ ಮಮತಾ ಹೊಸಗೌಡರ್‌, ಡಿಎಚ್‌ಒ ಡಾ.ರಾಘವೇಂದ್ರ ಸ್ವಾಮಿ ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next