Advertisement
ಶನಿವಾರವೇ ನಡೆದ ಮೂರನೇ ದಾಳಿಯಲ್ಲಿ ಅನಂತ್ ನಾಗ್ ಜಿಲ್ಲೆಯ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಬಂಕರ್ ಮೇಲೆ ಗ್ರೆನೇಡ್ ದಾಳಿ ಮಾಡಲಾಗಿದೆ. ಆದರೆ ಈ ದಾಳಿಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
Related Articles
Advertisement
ಅದಾಗ್ಯೂ ರಾತ್ರಿ 8 ಗಂಟೆ ಸುಮಾರಿಗೆ ಮತ್ತೋರ್ವನ ಮೇಲೆ ದಾಳಿ ನಡೆಸಲಾಗಿದೆ. ಮೊಹಮ್ಮದ್ ಶಾಫಿ ದಾರ್ ಎಂಬಾತನ ಮೇಲೆ ಗುಂಡು ಹಾರಿಸಲಾಗಿದ್ದು, ಆತ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಕೆಪಿ ರಸ್ತೆಯಲ್ಲಿರುವ ಸಿಆರ್‌ಪಿಎಫ್‌ನ 40 ಬೆಟಾಲಿಯನ್ ಬಂಕರ್ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.