Advertisement

Grihalakshmi: ಯೋಜನೆಯ ತಾಂತ್ರಿಕ ದೋಷ ಸರಿಪಡಿಸಿ: ಹೆಬ್ಟಾಳ್ಕರ್‌

11:21 PM Nov 02, 2023 | Team Udayavani |

ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫ‌ಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯ ಆಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ಸೂಚಿಸಿದರು.

Advertisement

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದರು.

ಇಲಾಖೆಯ ಉಪ ನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಇ-ಆಡಳಿತ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನ್ಯೂನತೆಗಳನ್ನು ಸರಿಪಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಸರಿಪಡಿಸಬೇಕು.

ಆಗಸ್ಟ್‌ ತಿಂಗಳಲ್ಲಿ ಶೇ.88ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟಂಬರ್‌ ತಿಂಗಳ ಪಾವತಿ ಪ್ರಕ್ರಿಯೆ ಹಂತಹಂತವಾಗಿ ನಡೆಯುತ್ತಿದೆ. ಅಕ್ಟೋಬರ್‌ ತಿಂಗಳಲ್ಲಿ ಶೇ.100ರಷ್ಟು ಫ‌ಲಾನುಭವಿಗಳಿಗೂ ಸಂದಾಯವಾಗುವಂತೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next