Advertisement
15-20 ಸ್ಥಾನ ಗೆಲುವುಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜೆಡಿಎಸ್‌ನವರು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ. ಏನೋ ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೂ, ಇಲ್ಲವಾದರೂ ನಾವು ರಾಜ್ಯದಲ್ಲಿ 15ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಬರುತ್ತದೆ ಎಂದು ಬಿಜೆಪಿಯವರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ಇಂತಹ ಮೂಢನಂಬಿಕೆ, ಮೌಡ್ಯತೆಗಳಲ್ಲಿ ನಂಬಿಕೆ ಇಲ್ಲ. ಅವರ ಅಧಿಕಾರಾವಧಿಯಲ್ಲಿ ಪ್ರವಾಹ ಬಂದು ಲಕ್ಷಾಂತರ ಮನೆಗಳು ಕೊಚ್ಚಿ ಹೋದವು, ಬಿದ್ದು ಹೋದವು. ಅದಕ್ಕೆ ಏನು ಹೇಳುತ್ತಾರೆ? ಎಂದರು.