Advertisement

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

11:37 PM Nov 12, 2024 | Team Udayavani |

ಹಾವೇರಿ/ಶಿಗ್ಗಾಂವಿ:ಪ್ರತೀ ಬಾರಿಯೂ ಚುನಾವಣೆಯ ಮುನ್ನ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂ. ಹಾಕುವುದು ನೀತಿ ಸಂಹಿತೆಯ ವಿರುದ್ಧವಾಗಿದೆ. ಚುನಾವಣ ಆಯೋಗ ತತ್‌ಕ್ಷಣ ಇದನ್ನು ತಡೆಹಿಡಿಯಬೇಕು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Advertisement

ಚುನಾವಣೆ ಪಾರದರ್ಶಕವಾಗಿರಬೇಕು. ರಾಜ್ಯ ಸರಕಾರ ಪ್ರತೀ ಚುನಾವಣೆಗೆ ಮುನ್ನ ಸರಕಾರದ ಹಣದಲ್ಲಿ ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳುವ ಕೆಲಸ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ. ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ.

ಹಾವೇರಿ ಜಿಲ್ಲಾಧಿಕಾರಿಗಳೂ ಕಣ್ಮುಚ್ಚಿ ಕುಳಿತಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next