Advertisement
ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಸುಮಾರು 908 ಕೋಟಿ ರೂ. ವೆಚ್ಚದಲ್ಲಿ ಹೊಸ ಟರ್ಮಿನಲ್ಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇದಲ್ಲದೇ ದೇಶಾದ್ಯಂತ ವಿಮಾನ ನಿಲ್ದಾಣಗಳ ವಿಸ್ತರಣೆ ಸಹಿತ 15 ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ.
ಮಾ.12ರಂದು ಕರ್ನಾಟಕದ 7ನೇ ವಂದೇ ಭಾರತ್ ರೈಲಿಗೂ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಈ ರೈಲು ಬೆಂಗಳೂರು ಮತ್ತು ಕಲಬುರಗಿಯ ನಡುವೆ ಕಾರ್ಯಾಚರಣೆ ನಡೆಸಲಿದ್ದು, ಇದು ಕಲ್ಯಾಣ ಕರ್ನಾಟಕ ವಿಭಾಗದ ಮೊದಲ ವಂದೇ ಭಾರತ್ ರೈಲು ಆಗಿದೆ.
Related Articles
Advertisement