Advertisement

‘ಅಂತರ್ಜಲ ವೃದ್ದಿಯ ಮಹತ್ವ ಅರಿಯಿರಿ’

09:51 AM Feb 23, 2019 | Team Udayavani |

ಬಂಟ್ವಾಳ : ಅಂತರ್ಜಲ ವೃದ್ಧಿಯ ಮಹತ್ವವನ್ನು ಅ ಧಿಕಾರಿಗಳು ಇತರರಿಗೆ ತಿಳಿಸುವ ಕೆಲಸ ಮಾಡಬೇಕಾಗಿದೆ. ನೀರಿನ ಸಮಸ್ಯೆ ನಿವಾರಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿ ಬೇಕಾಗಿದೆ. ಇಂತಹ ಕಾರ್ಯಕ್ರಮಗಳು ಪ್ರತಿಯೊಬ್ಬರಿಗೆ ಮುಟ್ಟುವ ರೀತಿಯಲ್ಲಿ ಅಗಲಿ ಎಂದು ತಹಶೀಲ್ದಾರ್‌ ರಶ್ಮಿ ಎಸ್‌.ಆರ್‌. ಹೇಳಿದರು.

Advertisement

ಅವರು ಫೆ. 21ರಂದು ಬಿ.ಸಿ. ರೋಡ್‌ ತಾ.ಪಂ.ನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ವಾಟರ್‌ ಮ್ಯಾನ್‌ ಅವರಿಗೆ ಬೆಂಗಳೂರು ಅಂತರ್ಜಲ ನಿರ್ದೇಶನಾಲಯ ಹಾಗೂ ಮಂಗಳೂರು ಜಿಲ್ಲಾ ಅಂತರ್ಜಲ ಕಚೇರಿ ಆಶ್ರಯದಲ್ಲಿ ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಆಲಿ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ತಾ.ಪಂ. ಕಾರ್ಯ ನಿರ್ವಹಣಾ ಧಿಕಾರಿ ರಾಜಣ್ಣ, ಸಹಾಯಕ ಕಾರ್ಯಪಾಲ ಅಭಿಯಂತ ಕೃಷ್ಣ ಕುಮಾರ್‌, ಉಡುಪಿ ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂ ವಿಜ್ಞಾನಿ ಡಾ| ಎಂ. ದಿನಕರ ಶೆಟ್ಟಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ನೋಣಯ್ಯ ನಾಯಕ್‌, ಮೆಸ್ಕಾಂ ಕಾರ್ಯ ನಿರ್ವಾಹಕ ಎಂಜಿನಿಯರ್‌ ಎಂ. ರಾಮಚಂದ್ರ, ಸಂಪನ್ಮೂಲ ವ್ಯಕ್ತಿ ಪ್ರೊ.| ಜಗದೀಶ್‌ ಬಾಳ, ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂವಿಜ್ಞಾನಿ ಜಾನಕಿ ಪಿ. ಉಪಸ್ಥಿತರಿದ್ದರು.

ಮಾಹಿತಿ
ಮಳೆ ನೀರಿನ ಸಂಗ್ರಹಣೆ-ಮರುಬಳಕೆ, ಅಂತರ್ಜಲ ಸಂರಕ್ಷಣೆ, ಕಲುಷಿತ ತಡೆಗಟ್ಟುವಿಕೆ, ತೆರೆದ ನಿರುಪಯುಕ್ತ ಕೊಳವೆ ಬಾವಿಗಳಲ್ಲಿ ಮಕ್ಕಳು ಬೀಳದಂತೆ ನಿಯಂತ್ರಿಸುವ ಕುರಿತು ಮಾಹಿತಿಯನ್ನು ನೀಡಲಾಯಿತು. ಅಂತರ್ಜಲ ಮಾಹಿತಿಯ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು. ನಿತೇಶ್‌ ಡಿ’ಸೋಜಾ ಸ್ವಾಗತಿಸಿ, ಚಂದ್ರಿಕಾ ವಂದಿಸಿದರು.

ಜನಜಾಗೃತಿ
ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಕಾರ್ಯಕ್ರಮ ಉದ್ಘಾಟಿಸಿ, ಮಳೆ ನೀರನ್ನು ಸಂರಕ್ಷಣೆ ಮಾಡಿ ಆ ಮೂಲಕ ಅಂತರ್ಜಲ ವೃದ್ಧಿ ಮಾಡಲು ಕ್ರಮ ಕೈಗೊಳ್ಳಲು ಮುಂದಾಗಬೇಕು. ಅಧಿಕಾರಿಗಳು ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಿ. ವಿವಿಧ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸಿ. ನೀರಿನ ಮಿತಬಳಕೆ, ಸದ್ಬಳಕೆ ಬಗ್ಗೆ ಎಲ್ಲರು ಪಣತೊಡಬೇಕು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next