ಉಳ್ಳಾಲ: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ವತಿ ಯಿಂದ ಹರೇಕಳ ನ್ಯೂಪಡು³ವಿನ ಹಾಜಬ್ಬರ ಸರಕಾರಿ ಪ್ರೌಢಶಾಲೆಯ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನೀಡಲಾಯಿತು.
ವಿಜ್ಞಾನ, ಸಾಮಾನ್ಯ ಜ್ಞಾನ, ಪದಕೋಶ ಸಹಿತ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸುಮಾರು ನೂರೈವತ್ತು ಪುಸ್ತಕಗಳನ್ನು ಗೃಹರಕ್ಷಕ ದಳದ ಕಮಾಂಡೆಂಟ್ ಡಾ| ಮುರಲೀ ಮೋಹನ ಚೂಂತಾರು ನೀಡಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ನಿರಂತರವಾಗಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು ನಮ್ಮ ಜ್ಞಾನ ಕೌಶಲವನ್ನು ವೃದ್ಧಿಸಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ನ್ಯೂಪಡು³ವಿ ನಲ್ಲಿರುವ ಸರಕಾರಿ ಶಾಲೆಯು ಅಕ್ಷರ ಸಂತ ಹರೇಕಳ ಹಾಜಬ್ಬರ ಕನಸಿನ ಕೂಸಾಗಿದ್ದು, ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಗುರುತಿಸಿ ಕೊಳ್ಳುವುದರೊಂದಿಗೆ, ಪಾಲಕರಿಗೆ ಹಾಗೂ ಶಾಲೆಗೆ ಕೀರ್ತಿ ತರಬೇಕು ಎಂದರು.
ಅಕ್ಷರ ಸಂತ ಹರೇಕಳ ಹಾಜಬ್ಬ ಅವರು, ವಿದ್ಯಾರ್ಥಿಗಳು ನಮ್ಮ ದೇಶದ ಶಕ್ತಿಯಾಗಿದ್ದಾರೆ. ಇಂತಹ ವಿದ್ಯಾರ್ಥಿಗಳನ್ನು ಜ್ಞಾನ ವಂತರಾಗಿ ಮಾಡುವುದು ನಮ್ಮೆ ಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ವತಿಯಿಂದ ಉಚಿತವಾಗಿ ಪುಸ್ತಕಗಳನ್ನು ವಿತರಿಸಿ ಶಾಲೆಯ ವಿದ್ಯಾರ್ಥಿಗಳಿಗೆ ಸಹಕರಿಸಿದ್ದಾರೆ ಎಂದು ಹೇಳಿದರು.
ಶಾಲಾ ಹಿರಿಯ ಶಿಕ್ಷಕಿ ರೂಪಾ ಎಂ.ಪಿ., ಶಿಕ್ಷಕಿಯರಾದ ಸುರೇಖಾ, ಜೋವಿತಾ ಎಸ್.ಆರ್., ಅನುರಾಧಾ ಎಸ್. ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.