Advertisement

ಪುಸ್ತಕ ಓದಿನಿಂದ ಜ್ಞಾನ ವೃದ್ಧಿಸಿಕೊಳ್ಳಿ

11:05 AM Aug 19, 2018 | Team Udayavani |

ಭಾಲ್ಕಿ: ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡು ಹೆಚ್ಚು ಜ್ಞಾನ ಪಡೆಯುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ರಘುಶಂಖ ಭಾತಂಬ್ರಾ ಹೇಳಿದರು.

Advertisement

ಕೋನಮೇಳಕುಂದಾ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ನಡೆದ “ಅಚ್ಚು ಮೆಚ್ಚಿನ ಪುಸ್ತಕ ರಸಪ್ರಶ್ನೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಅಭಿರುಚಿ ಹೆಚ್ಚಾಗಬೇಕು. ಪುಸ್ತಕಗಳನ್ನು ಪ್ರೀತಿಸಬೇಕು. ಇದರಿಂದ ಹೆಚ್ಚು ಜ್ಞಾನ ಸಂಪಾದನೆಗೆ ಸಹಕಾರಿಯಾಗುತ್ತದೆ ಎಂದರು.

ಕಿತ್ತೂರು ರಾಣಿ ಚನ್ನಮ್ಮ ಮಹಿಳಾ ಮಂಡಳದ ಕಾರ್ಯದರ್ಶಿ ಪುಣ್ಯವತಿ ವಿಸಾಜಿ ಮಾತನಾಡಿ, ವಿದ್ಯಾರ್ಥಿಗಳು ವೇದಿಕೆ ಸೇರಿದಂತೆ ಸಭೆ, ಸಮಾರಂಭಗಳಲ್ಲಿ ಧೈರ್ಯವಾಗಿ ಮಾತನಾಡುವ ಕಲೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕಮಠಾಣಾ ಸರಕಾರಿ ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ಶ್ರೀದೇವಿ ಪಾಟೀಲ್‌ ಮಾತನಾಡಿ, ಟಿವಿ ಹಾಗೂ ಸ್ಮಾರ್ಟ್‌ ಫೋನ್‌ಗಳ ಭರಾಟೆಯಲ್ಲಿ ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಅಭಿರುಚಿ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತ ಪಡಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಶಶಿಧರ ಕೋಸಂಬೆ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು. ನಿವೃತ್ತ ಪ್ರಾಚಾರ್ಯ ಲೀಲಾವತಿ ಚಾಕೋತೆ ಮಾತನಾಡಿದರು. ಕಿತ್ತೂರು ರಾಣಿ ಚನ್ನಮ್ಮ ಮಹಿಳಾ ಮಂಡಳದ ಅಧ್ಯಕ್ಷೆ
ಗುರುಮ್ಮ ಸಿದ್ದಾರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು.

Advertisement

ಮುಖ್ಯ ಶಿಕ್ಷಕಿ ಸುನಿತಾ ದಾಡಗೆ ಅಧ್ಯಕ್ಷತೆ ವಹಿಸಿದರು. ಇದೇ ವೇಳೆ ಹಲವು ವಿದ್ಯಾರ್ಥಿಗಳು ತಮ್ಮ ಅಚ್ಚುಮೆಚ್ಚಿನ ಪುಸ್ತಕ ಕುರಿತು ಮಾತನಾಡಿ, ಬಹುಮಾನ ಪಡೆದರು. ಅರಣ್ಯಾಧಿಕಾರಿ ಉಮಾಕಾಂತ, ಶಿಕ್ಷಕರಾದ ಬಾಲಾಜಿ ಮೇತ್ರೆ, ನಂದರಾಜ ಬಿರಾದಾರ್‌, ಶಿವಕುಮಾರ
ಬಿರಾದಾರ್‌, ಲಲಿತಾ ಕುಲಕರ್ಣಿ ಸೇರಿದಂತೆ ಹಲವರು ಇದ್ದರು. ರಾಜಕುಮಾರ ಬಸಗೊಂಡ ಸ್ವಾಗತಿಸಿದರು. ಶಿವಕುಮಾರ ಹಾಲಹಳ್ಳಿ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next