Advertisement

ಗೃಹಜ್ಯೋತಿ ಯೋಜನೆಗೆ ಕಲಬುರಗಿಯಿಂದ ಚಾಲನೆ: ಡಾ. ಶರಣಪ್ರಕಾಶ ಪಾಟೀಲ್

03:37 PM Jul 24, 2023 | Team Udayavani |

ಕಲಬುರಗಿ: ಎರಡು ನೂರು ಯುನಿಟ್ ವರೆಗೆ ಉಚಿತವಾಗಿ ವಿದ್ಯುತ್ ಬಳಸುವ ಗೃಹಜ್ಯೋತಿ ಯೋಜನೆಗೆ ಕಲಬುರಗಿಯಿಂದ ರಾಜ್ಯದಲ್ಲಿ ಚಾಲನೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದರು.

Advertisement

ಸೇಡಂದಲ್ಲಿ ನಡೆದ ಪತ್ರಿಕಾ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು, ಜುಲೈ ತಿಂಗಳಿನಿಂದ ಅರ್ಹರೆಲ್ಲರೂ ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ಸರ್ಕಾರವೇ ವಿದ್ಯುತ್ ಭರಿಸಲಿದೆ. ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವರು ಆಗಮಿಸಿ ಚಾಲ‌ನೆ ನೀಡಲಿದ್ದು, ಪ್ರಮುಖವಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ( ಎಐಸಿಸಿ) ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಗೃಹ ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಚಾಲನೆ ನೀಡಲಾಗಿದೆ. ಈಗ ಗೃಹ ಜ್ಯೋತಿ ಚಾಲನೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಮ್ಮ ಇಲಾಖೆಯಡಿ ಬರುವ ಯುವ ನಿಧಿ ಜಾರಿಗೊಳಿಸಲಾಗುವುದು.‌ಇದಕ್ಕೆ 2500 ಕೋ.ರೂ ತಗುಲಿದೆ ಎಂದರು.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಸುಮಾರು 52 ಸಾವಿರ ಕೋ.ರೂ ಬಡವರಿಗೆ ನೇರವಾಗಿ ತಲುಪಿಸುವ ಯೋಜನೆಗಳು ಇತಿಹಾಸದಲ್ಲಿ ದಾಖಲಾಗುವಂತೆ ಮಾಡಿವೆ ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next