Advertisement

State Election Commission: ರಾಜ್ಯ ಚುನಾವಣಾ ಆಯೋಗದ ಆಯುಕ್ತರಾಗಿ ಜಿ.ಎಸ್‌.ಸಂಗ್ರೇಶಿ?

09:03 PM Jun 27, 2024 | Team Udayavani |

ಬೆಂಗಳೂರು: ರಾಜ್ಯ ಚುನಾವಣಾ ಆಯೋಗಕ್ಕೆ ಜಿ.ಎಸ್‌.ಸಂಗ್ರೇಶಿ ನೂತನ ಸಾರಥಿ ಆಗಲಿದ್ದಾರೆ. ಸದ್ಯ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಜಿ.ಎಸ್‌.ಸಂಗ್ರೇಶಿ ಅವರನ್ನು ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಕ ಮಾಡುವ ಕುರಿತ ಪ್ರಸ್ತಾವನೆಯು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಮುಖ್ಯಮಂತ್ರಿಗೆ ಕಳುಹಿಸಿಕೊಡಲಾಗಿತ್ತು. ಮುಖ್ಯಮಂತ್ರಿಯವರು ಅದನ್ನು ಅನುಮೋದಿಸಿದ್ದು ಇದೀಗ ಮುಖ್ಯಮಂತ್ರಿಯವರ ಸಚಿವಾಲಯ ಕಡತವನ್ನು ರಾಜಭವನಕ್ಕೆ ರವಾನಿಸಿದೆ. ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಬೇಕಿದೆಯಷ್ಟೇ ಎಂದು ಸರ್ಕಾರದ ಉನ್ನತ ಮೂಲಗಳು ಹೇಳಿವೆ.

Advertisement

ರಾಜ್ಯ ಚುನಾವಣಾ ಆಯೋಗದ ಆಯುಕ್ತರಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಡಾ. ಬಿ.ಬಸವರಾಜು ಅವರ ಅವಧಿ ಜೂನ್‌ 23ಕ್ಕೆ ಕೊನೆಗೊಂಡಿತ್ತು. ಆ ಸ್ಥಾನಕ್ಕೆ ಸಂಗ್ರೇಶಿ ಅವರನ್ನು ನೇಮಕ ಮಾಡಲಾಗುತ್ತಿದೆ. ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿರುವ ಸಂಗ್ರೇಶಿ ಅವರ ಸೇವಾ ನಿವೃತ್ತಿ ಇನ್ನೊಂದು ತಿಂಗಳು ಬಾಕಿ ಇದೆ. ಉಳಿದ ಅವಧಿಗೆ ಸ್ವಯಂ ನಿವೃತ್ತಿ ಪಡೆದುಕೊಂಡು ಅವರು ರಾಜ್ಯ ಚುನಾವಣಾ ಆಯುಕ್ತರ ಹುದ್ದೆ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆ ವಹಿಸಿಕೊಳ್ಳುವುದಕ್ಕಿಂತ ಮುಂಚೆ ಜಿ.ಎಸ್‌. ಸಂಗ್ರೇಶಿ ಅವರು ಮೈಸೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀರಾಗಿ ಸೇವೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next