Advertisement

GSB ಸಮಾಜ ಹಿತರಕ್ಷಣ ವೇದಿಕೆ: ಶಿಸ್ತಿನ ಜೀವನಶೈಲಿ ಯಶಸ್ಸಿಗೆ ಮುನ್ನುಡಿ: ಗೋಪಾಲ ಕೃಷ್ಣ ಭಟ್‌

08:01 PM Aug 25, 2024 | Team Udayavani |

ಉಡುಪಿ: ಶೈಕ್ಷಣಿಕ ಕಾಲಘಟ್ಟದಲ್ಲಿ ಶಿಸ್ತಿನ ಜೀವನ ಶೈಲಿ ರೂಪಿಸಿಕೊಳ್ಳುವುದೇ ಭವಿಷ್ಯದ ಯಶಸ್ಸಿಗೆ ಮುನ್ನುಡಿ ಎಂದು ತ್ರಿಶಾ ಶೈಕ್ಷಣಿಕ ಸಮೂಹ ಸಂಸ್ಥೆಗಳ ಸಂಸ್ಥಾಪಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಕೃಷ್ಣ ಭಟ್‌ ಕಿವಿಮಾತು ಹೇಳಿದರು.

Advertisement

ಜಿಲ್ಲಾ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ವತಿಯಿಂದ ಮುದರಂಗಡಿ ಸಮರ್ಪಣಾ ಚಾರಿಟೆಬಲ್‌ ಟ್ರಸ್ಟ್‌ ಸಹಯೋಗದೊಂದಿಗೆ ರವಿವಾರ ಅಂಬಾಗಿಲಿನ ಅಮೃತ್‌ ಗಾರ್ಡನ್‌ ಸಭಾಭವನದಲ್ಲಿ ಜರಗಿದ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭದಲ್ಲಿ ಆಯೋಜಿಸಿದ ಶೈಕ್ಷಣಿಕ ಪ್ರೇರಣ ಕಾರ್ಯಾಗಾರದಲ್ಲಿ ಮಾತನಾಡಿದರು.

21ನೇ ಶತಮಾನದಲ್ಲಿ ಉದ್ಯೋಗ ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳು ತೆರೆದುಕೊಳ್ಳುತ್ತಿವೆ. ವೈದ್ಯಕೀಯ, ಎಂಜಿನಿಯರಿಂಗ್‌ ಮಾತ್ರವಲ್ಲದೇ ಜೀವನ ರೂಪಿಸಿಕೊಳ್ಳುವ ಸಾಕಷ್ಟು ಉದ್ಯೋಗವಕಾಶಗಳು ನಮ್ಮ ಮುಂದಿದೆ. ಇದಕ್ಕೆ ಪೂರಕ ಶಿಕ್ಷಣ, ಅಗತ್ಯ ಮಾಹಿತಿಯನ್ನು ಪಡೆದುಕೊಂಡು ಭವಿಷ್ಯಕ್ಕೆ ಮುನ್ನುಡಿ ಹಾಕಿಕೊಳ್ಳಬೇಕು. ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಜಿಎಸ್‌ಬಿ ಸಮಾಜದಲ್ಲಿ ಸಾಕಷ್ಟು ಮಂದಿ ಮಾದರಿಯಾಗಿದ್ದು, ಇವರ ಆದರ್ಶಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು. ಪ್ರಸ್ತುತ ವಿದ್ಯಾರ್ಥಿ ವೇತನ, ಪುರಸ್ಕಾರ ಪಡೆದ ಮಕ್ಕಳು ಮುಂದಿನ ಪೀಳಿಗೆಗೂ ಅನುಕೂಲವಾಗುವ ನಿಟ್ಟಿನಲ್ಲಿ ನಿಮ್ಮ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು. ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿ ಗಳು, ಪಾಲಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು, ಸಮಾಜದ ಗಣ್ಯರು, ಧಾನಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next