ಜಿಎಸ್‌ಟಿ ಮಂಡಳಿ, ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ. ಈ ಹಿಂದೆ ಬಟ್ಟೆ ಮೇಲಿನ ಜಿಎಸ್‌ಟಿಯನ್ನು ಶೇ.5ರಿಂದ 12ಕ್ಕೆ ಹೆಚ್ಚಿಸುವುದು ಮತ್ತು ಒಂದು ಸಾವಿರ ರೂ. ಒಳಗಿನ ಚಪ್ಪಲಿಗಳ ಮೇಲಿನ ತೆರಿಗೆ ಯನ್ನು ಹೆಚ್ಚಿಸುವ ಸಂಬಂಧ ಜಿಎಸ್‌ಟಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು.
Advertisement
ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ಜಿಎಸ್‌ಟಿ ಮಂಡಳಿಯ 46ನೇ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳಬೇಕಾಗಿತ್ತು. ಆದರೆ, ಎಲ್ಲ ರಾಜ್ಯಗಳು ಮತ್ತು ಮಾರುಕಟ್ಟೆಯಿಂದ ತೀವ್ರ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳ ನಿರ್ಧಾರವನ್ನು ಮುಂದೂಡುವ ಬಗ್ಗೆ ಸರ್ವಾನುಮತದಿಂದ ತೀರ್ಮಾನ ತೆಗೆದುಕೊಳ್ಳಲಾಯಿತು. ಫೆಬ್ರವರಿ ಅಂತ್ಯದಲ್ಲಿ ಮತ್ತೂಮ್ಮೆ ಜಿಎಸ್‌ಟಿ ಮಂಡಳಿ ಸಭೆ ನಡೆಯಲಿದ್ದು, ಆಗ ಈ ಬಗ್ಗೆ ತೀರ್ಮಾನ ತೆಗೆದು ಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.