Advertisement
ದಾಖಲೆ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದು, ದೇಶದ ಅರ್ಥ ವ್ಯವಸ್ಥೆಗೆ ಸಂತೋಷ ತರುವ ವಿಚಾರ ಎಂದು ಬಣ್ಣಿಸಿದ್ದಾರೆ. 2022ರ ಮಾರ್ಚ್‌ನಲ್ಲಿ 1,42,095 ಲಕ್ಷ ಕೋಟಿ ರೂ., ಪ್ರಸಕ್ತ ವರ್ಷದ ಮಾರ್ಚ್‌ನಲ್ಲಿ 1,60, 122 ಲಕ್ಷ ಕೋಟಿ ರೂ., 2022ರ ಫೆಬ್ರವರಿಯಲ್ಲಿ 1,33, 025 ಲಕ್ಷ ಕೋಟಿ ರೂ., ಪ್ರಸಕ್ತ ವರ್ಷದ ಫೆಬ್ರವರಿಯಲ್ಲಿ 1,49, 577 ಲಕ್ಷ ಕೋಟಿ ರೂ., 2022ರ ಜನವರಿಯಲ್ಲಿ 1,40, 986 ಲಕ್ಷ ಕೋಟಿ ರೂ., ಪ್ರಸಕ್ತ ವರ್ಷದ ಜನವರಿಯಲ್ಲಿ 1,57, 554 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು. 2017 ಜು.1ರಂದು ಜಿಎಸ್‌ಟಿಯನ್ನು ದೇಶಾದ್ಯಂತ ಜಾರಿ ಮಾಡಲಾಗಿತ್ತು. ಕೈಗಾರಿಕೆ ಮತ್ತು ಉದ್ದಿಮೆ ವಲಯದ ಪ್ರಮುಖರು ಕೂಡ ಜಿಎಸ್‌ಟಿ ಸಾಧನೆಗೆ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಅರ್ಥ ವ್ಯವಸ್ಥೆ ಬಿರುಸಾಗಿ ಬೆಳವಣಿಗೆ ಹೊಂದುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಕೊಂಡಾಡಿದ್ದಾರೆ.
ಕಳೆದ ತಿಂಗಳು ಒಟ್ಟು ಜಿಎಸ್‌ಟಿ ಸಂಗ್ರಹಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಕೊಡುಗೆ ಶೇ.23ಕ್ಕೆ ಏರಿಕೆಯಾಗಿದೆ. 2022ರ ಎಪ್ರಿಲ್‌ನಲ್ಲಿ 11,820 ಕೋಟಿ ರೂ. ಸಂಗ್ರಹವಾಗಿದ್ದರೆ, ಕಳೆದ ತಿಂಗಳು 14,593 ಕೋಟಿ ರೂ. ಸಂಗ್ರಹವಾಗಿದೆ. ಈ ಮೂಲಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಹಾರಾಷ್ಟ್ರ ಮೊದಲ ಸ್ಥಾನ ಪಡೆದುಕೊಂಡಿದೆ. ಆ ರಾಜ್ಯದಿಂದ 27,495 ಕೋಟಿ ರೂ. ಸಂಗ್ರಹವಾಗಿದೆ. ದೇಶದ ಅರ್ಥ ವ್ಯವಸ್ಥೆಗೆ ಇದು ಅತ್ಯಂತ ಸಂತಸ ತರುವ ವಿಚಾರ. ಕಡಿಮೆ ಪ್ರಮಾಣದ ತೆರಿಗೆ ವ್ಯವಸ್ಥೆ ಇದ್ದರೂ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ ಎಂದರೆ ಜಿಎಸ್‌ಟಿ ವ್ಯವಸ್ಥೆ ಯಶಸ್ಸು ಪಡೆದಿರುವುದಕ್ಕೆ ಸಾಕ್ಷಿ.
-ನರೇಂದ್ರ ಮೋದಿ, ಪ್ರಧಾನ ಮಂತ್ರಿ
Related Articles
Advertisement