Advertisement

ಜಿಎಸ್‌ಟಿ: ಸಭೆ ಮುಂದೂಡಿಕೆ

12:45 PM Jul 26, 2019 | |

ನವದೆಹಲಿ: ವಿದ್ಯುತ್‌ ಚಾಲಿತ ವಾಹನಗಳ ಮೇಲಿನ ತೆರಿಗೆ ಇಳಿಕೆ ನಿಟ್ಟಿನಲ್ಲಿ ಗುರುವಾರ ನಡೆಯಬೇಕಿದ್ದ ಜಿಎಸ್‌ಟಿ ಮಂಡಳಿ ಸಭೆ ಮುಂದೂಡಿಕೆಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ ಅಧಿವೇಶನದಲ್ಲಿ ಬ್ಯುಸಿಯಾಗಿರುವ ಕಾರಣ ಸಭೆ
ಮುಂದೂಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

36ನೇ ಜಿಎಸ್‌ಟಿ ಮಂಡಳಿ ಸಭೆಯು ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆಯಬೇಕಿತ್ತು. ವಿದ್ಯುತ್‌ಚಾಲಿತ ವಾಹನಗಳ ಮೇಲೆ ಈಗಿರುವ ಶೇ.12 ತೆರಿಗೆಯನ್ನು ಶೇ.5ಕ್ಕಿಳಿಸುವ
ಪ್ರಸ್ತಾಪ ಕುರಿತು ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬೇಕಿತ್ತು. ಆದರೆ, ಸಭೆ ಮುಂದೂಡಲ್ಪಟ್ಟಿದ್ದು, ಹೊಸ ದಿನಾಂಕ ಇನ್ನಷ್ಟೇ ನಿಗದಿ ಆಗಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next