Advertisement

ಇಂದು ಜಿಎಸ್‌ಟಿ ಮಂಡಳಿ 19ನೇ ಸಭೆ

03:40 AM Jul 17, 2017 | Karthik A |

ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೆ ಬಂದು ಎರಡು ವಾರ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಜಿಎಸ್‌ಟಿ ಮಂಡಳಿ ಸಭೆ ಸೇರಲಿದೆ. ಏಕರೂಪದ ತೆರಿಗೆ ಜಾರಿಯ ಬಳಿಕದ ಆಗುಹೋಗುಗಳ ಕುರಿತು ಸೋಮವಾರ ನಡೆಯುವ ಸಭೆಯಲ್ಲಿ ಚರ್ಚಿಸಲಾಗುತ್ತದೆ. ವ್ಯಾಪಾರಸ್ಥರು ಮತ್ತು ಗ್ರಾಹಕರ ಪ್ರತಿಕ್ರಿಯೆಯೇನು, ಅವರಿಗೆ ಆಗುತ್ತಿರುವ ಲಾಭ, ನಷ್ಟಗಳೇನು ಎಂಬ ಬಗ್ಗೆಯೂ ಚರ್ಚೆ ನಡೆಯಲಿದೆ. ವಿತ್ತ ಸಚಿವ ಜೇಟ್ಲಿ ಅಧ್ಯಕ್ಷತೆಯಲ್ಲಿ 19ನೇ ಸಭೆ ನಡೆಯಲಿದ್ದು, ರಾಜ್ಯಗಳ ಪ್ರತಿನಿಧಿಗಳ ಜತೆ ಸಚಿವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ಮಾಡಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next