Advertisement

ಜಿಎಸ್‌ಟಿ: ಕೇಂದ್ರದ ವಿರುದ್ಧ ಎಚ್‌ಡಿಡಿ ಅಸಮಾಧಾನ

06:05 AM Apr 09, 2018 | Team Udayavani |

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ ಜಾರಿ(ಜಿಎಸ್‌ಟಿ) ಮತ್ತು ನೋಟು ಅಮಾನ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಇದರಿಂದ ವ್ಯಾಪಾರಿಗಳು ಮಾತ್ರವಲ್ಲದೆ, ಜನಸಾಮಾನ್ಯರಿಗೂ ಸಾಕಷ್ಟು ತೊಂದರೆಯಾಗಿದೆ ಎಂದು ಹೇಳಿದ್ದಾರೆ.

Advertisement

ಬಸವನಗುಡಿ ವಿಧಾನಸಭಾ ಕ್ಷೇತ್ರದ ಗಿರಿನಗರ ಅವಧಾನಿ ಕನ್ವೆನÒನ್‌ ಸೆಂಟರ್‌ನಲ್ಲಿ ಭಾನುವಾರ ಜೈನ್‌ ಮೈನಾರಿಟಿ ಟ್ರಸ್ಟ್‌ ಹಮ್ಮಿಕೊಂಡಿದ್ದ ಮಾರ್ವಾರ (ಮಾರ್ವಾಡಿ) ಜನಾಂಗದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ತರಾತುರಿಯಲ್ಲಿ ಜಿಎಸ್‌ಟಿ ಜಾರಿಗೆ ತಂದಿದ್ದು, ಇದರಿಂದ ಸಾಕಷ್ಟು ಗೊಂದಲಗಳುಂಟಾಗಿ ಜನ ಸಾಮಾನ್ಯರು ಮತ್ತು ವ್ಯಾಪಾರಿಗಳು ಸಾಕಷ್ಟು ಸಮಸ್ಯೆ ಎದುರಿಸುವಂತಾಯಿತು. ಈಗ ಇದು ಕೇಂದ್ರ ಸರ್ಕಾರಕ್ಕೆ ಮನವರಿಕೆಯಾಗಿದೆ. ಮೊದಲೇ ಯೋಚಿಸಿದ್ದರೆ ಸಮಸ್ಯೆಯಾಗದಂತೆ ನೋಡಿಕೊಳ್ಳಬಹುದಿತ್ತು ಎಂದರು.

ಅದೇರೀತಿ ನೋಟು ಅಮಾನ್ಯ ಕ್ರಮವೂ ಸಾಕಷ್ಟು ತೊಂದರೆಗಳನ್ನುಉಂಟುಮಾಡಿತು. ನಗದು ರಹಿತ ವಹಿವಾಟಿಗೆ ಆದ್ಯತೆ ನೀಡುವುದಾಗಿ ಕೇಂದ್ರ ಭರವಸೆ ನೀಡಿತಾದರೂ ಅದನ್ನು ಸರಿಯಾಗಿ ಕಾರ್ಯರೂಪಕ್ಕೆ ತರಲು ಸಾಧ್ಯವಾಗಲಿಲ್ಲ. ಅದೇ
ರೀತಿ ಮೇಕ್‌ ಇನ್‌ ಇಂಡಿಯೂ ಕೂಡ ಯಶಸ್ಸು ಕಂಡಿಲ್ಲ. ಕೇಂದ್ರದಲ್ಲಿ ಎನ್‌ಡಿಎ ಭಾಗವಾಗಿದ್ದ ಕೆಲವು ಪಕ್ಷಗಳು ಸರ್ಕಾರದ ಕೆಲವು ಜನವಿರೋಧಿ ನೀತಿಗಳ ವಿರುದ್ಧ ತಿರುಗಿ ಬಿದ್ದಿರುವ ಕಾರಣ 2014ರಲ್ಲಿ ಕೇಂದ್ರ ಸರ್ಕಾರಕ್ಕಿದ್ದ ಅಧಿಕಾರ ಈಗ
ಇಲ್ಲದಂತಾಗಿದೆ ಎಂದು ಹೇಳಿದರು.

ಈ ಬಾರಿ ಜೆಡಿಎಸ್‌ ಸರ್ಕಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆಂಬ ಭರವಸೆಯಿದೆ. ರಾಜ್ಯದಲ್ಲಿ ಕಳೆದ 10 ವರ್ಷ ಅಧಿಕಾರ ನಡೆಸಿದ ರಾಷ್ಟ್ರೀಯ ಪಕ್ಷಗಳು ಮತ್ತು ಅವುಗಳ ಕಾರ್ಯವೈಖರಿ ಬಗ್ಗೆ ಜನ ಬೇಸರಗೊಂಡಿದ್ದು, ರಾಜ್ಯದಲ್ಲಿ ಸ್ಥಳೀಯರಿಗೆ ಅನುಕೂಲವಾಗಬೇಕಾದರೆ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕೆಂಬ ಅಭಿಪ್ರಾಯಕ್ಕೆ ಬಂದಿದ್ದಾರೆ. ಹೀಗಾಗಿಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಪ್ರಾದೇಶಿಕ ಪಕ್ಷ ಜೆಡಿಎಸ್‌ಗೆ ಬೆಂಬಲ ನೀಡುತ್ತಾರೆಂಬ ವಿಶ್ವಾಸವಿದೆ ಎಂದರು.

Advertisement

ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಪಿ.ಜಿ.ಆರ್‌.ಸಿಂಧ್ಯಾ, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಸೇರಿ ಹಲವರು
ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next