ಮುಂಬೈ: ನಕಲಿ ಬಿಲ್‌ಗಳನ್ನು ನೀಡಿ ಕೇಂದ್ರ ಸರ್ಕಾರಕ್ಕೆ 1 ಸಾವಿರ ಕೋಟಿ ರೂ. ವಂಚಿಸಿದ ಪ್ರಕರಣ ಮುಂಬೈನಲ್ಲಿ ಬುಧವಾರ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಎಸ್‌ಟಿ ಅಧಿಕಾರಿಗಳು ಅಕೌಂಟೆಂಟ್ ಎಂದು ಹೇಳಿಕೊಂಡ 27 ವರ್ಷ ವಯಸ್ಸಿನ ವ್ಯಕ್ತಿಯನ್ನು ಬಂಧಿಸಲಾಗಿದೆ.
ಖಾಸಗಿ ಸಂಸ್ಥೆಯೊಂದರ ವಹಿವಾಟುಗಳಲ್ಲಿ ವಂಚನೆ ನಡೆದಿದೆ ಎಂಬ ಬಗ್ಗೆ ಮುಂಬೈ ವಲಯದ ಜಿಎಸ್‌ಟಿ ಆಯುಕ್ತರ ಕಚೇರಿಗೆ ಮಾಹಿತಿ ಲಭ್ಯವಾಗಿತ್ತು. ಅದರ ಆಧಾರದ ಮೇಲೆ, ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ
ಪದವಿ ಪೂರ್ವ ಶಿಕ್ಷಣ ಪಡೆದ ಯುವಕ ನಕಲಿ ಬಿಲ್‌ಗಳನ್ನು ಸೃಷ್ಟಿ 180 ಕೋಟಿ ರೂ. ಮೌಲ್ಯದ ಇನ್‌ಪುಟ್ ಕ್ರೆಡಿಟ್ ಮೊತ್ತ ಪಡೆದುಕೊಂಡು ವಂಚಿಸಿದ್ದ ಎಂದು ಗೊತ್ತಾಗಿದೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ನ್ಯಾಯಾಧೀಶರು 14 ದಿನಗಳ ಕಾಲ ಯುವಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.