Advertisement

ಅಡಿಕೆ ಮೇಲೆ ಜಿಎಸ್‌ಟಿ : ಸಿದ್ದರಾಮಯ್ಯ ಖಂಡನೆ

11:28 PM Aug 20, 2022 | Team Udayavani |

ಬೆಂಗಳೂರು: ವಿದೇಶಿ ಅಡಿಕೆಯ ಆಮದಿನ ಮೇಲಿನ ಅಬಕಾರಿ ಸುಂಕವನ್ನು ಶೇ.110ರಷ್ಟು ಕಡಿಮೆ ಮಾಡಿ, ನಮ್ಮ ರೈತರು ಬೆಳೆಯುವ ಅಡಿಕೆ ಮೇಲಿನ ಜಿಎಸ್‌ಟಿ ಹೆಚ್ಚಿಸಲು ಮುಂದಾಗಿರುವ ಕೇಂದ್ರ ಸರಕಾರದ ಕ್ರಮವನ್ನು ವಿಪಕ್ಷ ನಾಯಕ‌ ಸಿದ್ದರಾಮಯ್ಯ ಖಂಡಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಲೆನಾಡು ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳಿದ್ದಾಗ ಮಲೆನಾಡಿನ ರೈತರು ಮತ್ತು ಅಡಿಕೆ ಬೆಳೆಗಾರರು ತಮ್ಮನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ರೈತರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಯಾವುದೇ ಪ್ರಯೋಜನವಾಗಿಲ್ಲ. ಅದರ ಬದಲಿಗೆ ಸಮಸ್ಯೆ ಬಿಗಡಾಯಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಲ್ಲಿ ಅಡಿಕೆ ಸಂಶೋ ಧನ ಕೇಂದ್ರ ತೆರೆಯುವುದಾಗಿ ಅಮಿತ್‌ ಶಾ ಹೇಳಿದ್ದು ಇನ್ನೂ ಜಾರಿಗೆ ಬಂದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next