ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಹಿನಕಲ್‌ನಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಭವನದ ಉದ್ಘಾಟನಾ ಸಮಾರಂಭ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸಮಾಗಮಕ್ಕೆ ಸಾಕ್ಷಿಯಾಯಿತು.
ಕಳೆದ ವಿಧಾನಸಭಾ ಚುನಾವಣೆಯ ಜಿದ್ದಾ ಜಿದ್ದಿನ ಹೋರಾಟದಲ್ಲಿ ಜಿಟಿಡಿ ಅವರು ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದರು. ಆ ಬಳಿಕ ಇದೆ ಮೊದಲ ಬಾರಿಗೆ ಇಬ್ಬರು ನಾಯಕು ವೇದಿಕೆ ಹಂಚಿಕೊಂಡಿದ್ದಾರೆ. ವೇದಿಕೆಯಲ್ಲಿ ಇಬ್ಬರೂ ನಗುನಗುತ್ತಾ ಕುಳಿತು ಆತ್ಮೀಯವಾಗಿ ಮಾತನಾಡಿದರು.
ಇದನ್ನೂ ಓದಿ :ಜಿ.ಟಿ.ದೇವೆಗೌಡ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ : ಸಿದ್ದರಾಮಯ್ಯ
ಜೆಡಿಎಸ್‌ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲು ಮುಂದಾಗಿರುವ ಜಿಟಿಡಿ ಅವರು ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಇಂದೇ ಸಂದೇಶ ರವಾನಿಸಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಬಣ್ಣಿಸಿದ್ದಾರೆ.
ಜಿಟಿಡಿ ಅವರು ಕಾಂಗ್ರೆಸ್ ಸೇರುವುದನ್ನು ವಿರೋಧಿಸಿದ್ದ ಕೆಲ ಪ್ರಮುಖ ಮುಖಂಡರೂ ವೇದಿಕೆಯಲ್ಲಿ ಹಾಜರಿದ್ದು, ಇಬ್ಬರು ನಾಯಕರ ಸಮಾಗಮಕ್ಕೆ ಸಾಕ್ಷಿಯಾದರು.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜಿಟಿಡಿ ಅವರ ವಿರುದ್ಧ 36,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಸಿದ್ದರಾಮಯ್ಯ ಅವರು ಭಾರೀ ಸೋಲು ಅನುಭವಿಸಿದ್ದರು.