Advertisement

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

03:50 AM Jan 06, 2025 | Team Udayavani |

ಮೈಸೂರು: ಒಂದು ಕಡೆ ಗ್ಯಾರಂಟಿ ಕೊಟ್ಟು, ಮತ್ತೊಂದೆಡೆ ಬೆಲೆ ಹೆಚ್ಚಿಸಿ ಜನಸಾಮಾನ್ಯರಿಂದ ಹಣ ಕಿತ್ತುಕೊಳ್ಳುವ ಕೆಲಸ ರಾಜ್ಯ ಸರ್ಕಾರದಿಂದ ಆಗುತ್ತಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಟೀಕಿಸಿದರು.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಈಗ ಕೇವಲ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಣ ದರ ಏರಿಕೆ ಮಾತ್ರವಲ್ಲ, ಎಲ್ಲ ಅಗತ್ಯ ವಸ್ತುಗಳ ಬೆಲೆಯೂ ಏರಿಕೆ ಆಗಿದೆ. ಶ್ರೀಮಂತರು ಯಾರು ಬಸ್‌ನಲ್ಲಿ ಪ್ರಯಾಣ ಮಾಡುವುದಿಲ್ಲ. 5, 10 ರೂ. ಹೆಚ್ಚಾದರೂ ಸಾಮಾನ್ಯ ಜನರಿಗೆ ತೊಂದರೆ ಆಗಲಿದೆ. ಇಷ್ಟಾಗಿಯೂ ಬೆಲೆ ಏರಿಕೆಯನ್ನು ಸಚಿವರು, ಕಾಂಗ್ರೆಸ್‌ ಶಾಸಕರು ಸಮರ್ಥಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು.

ಕಾಂಗ್ರೆಸ್‌ ಆಡಳಿತದಲ್ಲಿ ದಿನದಿನಕ್ಕೆ ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಿರುಕುಳ, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಅವರಿಗೆ ನೈತಿಕತೆಯೇ ಇಲ್ಲ ಎಂದು ಕಿಡಿಕಾರಿದರು.

ಯಾರೇ ಮಾಹಿತಿ ಕಲೆ ಹಾಕಿದರೂ ತೊಂದರೆ ಇಲ್ಲ
ವಕ್ಫ್ ವಿರುದ್ಧ ಬಸನಗೌಡ ಪಾಟೀಲ್‌ ಯತ್ನಾಳ್‌ ಟೀಮ್‌ ಪ್ರತ್ಯೇಕ ಹೋರಾಟ ಮಾಡುತ್ತಿಲ್ಲ. ಅವರು ಬಿಜೆಪಿಯವರೇ, ಯಾರೇ ಮಾಹಿತಿ ಕಲೆ ಹಾಕಿದರೂ ತೊಂದರೆ ಇಲ್ಲ. ಮೊದಲಿಗೆ ನನ್ನ ನೇತೃತ್ವದಲ್ಲಿಯೇ ವಕ್ಫ್ ಆಸ್ತಿ ವಿಚಾರವಾಗಿ ಸಮಿತಿ ರಚನೆ ಮಾಡಲಾಗಿತ್ತು. ಎಲ್ಲೆಡೆ ಒಬ್ಬರೇ ಹೋಗಲು ಸಾಧ್ಯವಾಗದ ಸನ್ನಿವೇಶದಲ್ಲಿ ಪೂರಕವಾಗಿ ಯತ್ನಾಳ್‌ ಮತ್ತು ತಂಡ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next